×
Ad

ಆ.15: ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

Update: 2023-08-14 19:58 IST

ಮಂಗಳೂರು,ಆ.14: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆ.15ರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ಅಂದು ಬೆಳಗ್ಗೆ 9ಕ್ಕೆ ನಗರದ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿರುವ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮ ದಲ್ಲಿ ಧ್ವಜಾರೋಹಣ ನೆರವೇರಿಸುವರು. 9:45ಕ್ಕೆ ನಗರದ ಪುರಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸು ವರು. ಮಧ್ಯಾಹ್ನ 12:30ಕ್ಕೆ ಕೋಡಿಯಾಲ್‌ಬೈಲ್‌ನ ಯೆನಪೋಯ ಸ್ಪೆಷ್ಪಾಲಿಟಿ ಆಸ್ಪತ್ರೆಯಲ್ಲಿ ಆರ್ಥೋಪೆಡಿಕ್ ರೋಬೋಟಿಕ್ ಸರ್ಜಿಕಲ್ ಫೆಸಿಲಿಟಿ ಮತ್ತು ಅಡ್ರೆಸ್ಸಿಂಗ್ ಆಫ್ ಓನರ್ ಆಫ್ ದ ಅಸೋಸಿಯೇಶನ್ ಆಫ್ ಪ್ರೈವೇಟ್ ಹಾಸ್ಪಿಟಲ್ ಆಫ್ ಮ್ಯಾಂಗಳೂರ್ ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಅಪರಾಹ್ನ 3ಕ್ಕೆ ನಗರದ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಫಸ್ಟ್ ನ್ಯೂರೋ ಬ್ರೈನ್ ಅಂಡ್ ಸ್ಫೈನ್ ಸೂಪರ್ ಸ್ಪೆಶಾಲಿಟಿ ಹಾಸ್ಪಿಟಲ್‌ನ ಉದ್ಘಾಟನೆಯಲ್ಲಿ ಭಾಗವಹಿಸುವರು. ಅಲ್ಲಿಂದ ಸಂಜೆ 5ಕ್ಕೆ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ವಾಸ್ತವ್ಯ ಹೂಡಿ ಬಳಿಕ ರಾತ್ರಿ 9ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News