×
Ad

ಆಟೋ ಚಾಲಕ ಜಬ್ಬಾರ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Update: 2025-12-31 21:04 IST

ಸುಳ್ಯ: ಶಾಂತಿನಗರ ನಿವಾಸಿ ಆಟೋ ಚಾಲಕ ಜಬ್ಬಾರ್ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಸುಳ್ಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ರಫೀಕ್ ಪಡು (41) ಹಾಗು ಸಂಪಾಜೆ ನಿವಾಸಿ ಮನೋಹರ್ ಕೆ.ಎಸ್. (42) ಎಂದು ಗುರುತಿಸಲಾಗಿದೆ.

ಅ.17 ರಂದು ಅಟೋ ಚಾಲಕ ಜಬ್ಬಾರ್ ರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು. ರಫೀಕ್ ಪಡು ಮತ್ತು ಮನೋಹರ್ ಸೇರಿ ಹಲ್ಲೆ ನಡೆಸಿದರ ಪರಿಣಾಮವಾಗಿ ತನ್ನ ಪತಿ ಮೃತಪಟ್ಟಿರುವುದಾಗಿ  ಜಬ್ಬಾರ್ ಅವರ ಪತ್ನಿ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಹಲ್ಲೆಯಿಂದ ಜಬ್ಬಾರ್ ಮೃತಪಟ್ಟಿದ್ದಾರೆ ಎಂದು ವೈದ್ಯಕೀಯ ವರದಿಯಲ್ಲಿ ದೃಡಪಟ್ಟ ಕಾರಣ ಕೊಲೆ ಪ್ರಕರಣವಾಗಿ ಮಾರ್ಪಡಿಸಲಾಗಿದೆ.

ಡಿ 30 ರಂದು ಆರೋಪಿ ರಫೀಕ್‍ನನ್ನು ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆತನನ್ನು ಹೆಚ್ಚಿನ ತನಿಖೆಗಾಗಿ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿದೆ. ಮತ್ತೋರ್ವ ಆರೋಪಿ ಸಂಪಾಜೆಯ ಮಹೋಹರ್ ನನ್ನು ಕೂಡ ದಸ್ತಗಿರಿ ಮಾಡಲಾಗಿದ್ದು, ಅಲ್ಲದೇ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News