×
Ad

ಬಸ್ ನಿಲ್ದಾಣಗಳಲ್ಲಿ ಬ್ಯಾಗ್ ಕಳ್ಳತನ: ಆರೋಪಿ ಸೆರೆ

Update: 2026-01-30 19:13 IST

ಮಂಗಳೂರು: ನಗರದ ಬಿಜೈ ಸರಕಾರಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗ್ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿಯ ಮುಹಮ್ಮದ್ ಇಮ್ರಾನ್ (44) ಎಂಬಾತನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.

ಜ.23ರಂದು ಸಂಜೆ 7 ಗಂಟೆಗೆ ಬೆಂಗಳೂರಿಗೆ ತೆರಳಲು ಬಸ್ಸಿನಲ್ಲಿ ಕುಳಿತಿದ್ದ ಇಬ್ಬರು ಮಹಿಳೆಯರು ಹಾಗೂ ಹಿರಿಯ ನಾಗರಿಕರು ಚಿನ್ನಾಭರಣ ಮತ್ತು ನಗದು ಹೊಂದಿದ್ದ ಟ್ರಾಲಿ ಬ್ಯಾಗ್ ಕಳವಾಗಿರುವ ಬಗ್ಗೆ ಬರ್ಕೆ ಠಾಣೆಗೆ ದೂರು ನೀಡಿದ್ದರು.

ಆರೋಪಿಯ ಪತ್ತೆಗಾಗಿ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಎಸ್ಸೈ ವಿನಾಯಕ ತೊರಗಲ್ ನೇತೃತ್ವದ ವಿಶೇಷ ತಂಡವನ್ನು ರಚಿಸಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಈ ತಂಡವು ಜ.28ರಂದು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಬಳಿ ಆರೋಪಿಯನ್ನು ಬಂಧಿಸಿದೆ.

ಈತನು ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಸರಣಿ ಬ್ಯಾಗ್ ಕಳ್ಳತನ ಮಾಡುತ್ತಿದ್ದ. ಅಂತರ್‌ಜಿಲ್ಲಾ ಕಳವು ಆರೋಪಿಯಾಗಿರುವ ಈತನ ಮೇಲೆ 11 ಬ್ಯಾಗ್ ಕಳ್ಳತನ ಪ್ರಕರಣ ದಾಖಲಿಸಲಾಗಿತ್ತು. ಈತನಿಂದ 6,47,920 ರೂ. ಮೌಲ್ಯದ 46.28 ಗ್ರಾಂ ಚಿನ್ನಾಭರಣ ಹಾಗೂ 5,000 ರೂ.ವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈತನನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಕಾರ್ಯಾಚರಣೆಯಲ್ಲಿ ಬರ್ಕೆ ಠಾಣೆಯ ಸಿಬ್ಬಂದಿಗಳಾದ ಸುಜನ್, ವಾಸುದೇವ, ರವಿ ಲಮಾಣಿ, ಸಿದ್ದು, ಹರೀಶ್, ನಿತಿಶ್, ಗಾಲಿಬ್ ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News