×
Ad

ಬಜ್ಪೆ: ದನ ಕಳವು ಆರೋಪ; ಇಬ್ಬರ ಬಂಧನ

Update: 2023-08-19 23:14 IST

ಬಜ್ಪೆ, ಆ.19: ದನಗಳನ್ನು ಕಳವು ಮಾಡಿದ ಆರೋಪದಲ್ಲಿ ಇಬ್ಬರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.

ಮಲಾರ್ ಬದ್ರಿಯಾನಗರ ನಿವಾಸಿ ಇರ್ಫಾನ್ (30), ಬಂಟ್ವಾಳ ತಾಲೂಕಿನ ಸಂಗಬೆಟ್ಟು ನಿವಾಸಿ ಆರೀಫ್ (32) ಬಂಧಿತರು. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆ.14ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬಡಗ ಎಡಪದವು ಗ್ರಾಮದ ದಡ್ಡಿ ಎಂಬಲ್ಲಿಂದ 3 ದನಗಳು ಕಳವಾಗಿದ್ದು, ಪ್ರಕರಣ ದಾಖಲಾಗಿತ್ತು. ಕಾರ್ಯಾಚರಣೆ ನಡೆಸಿದ ಬಜ್ಪೆ ಪೊಲೀಸರು ಶನಿವಾರ ಕೃತ್ಯಕ್ಕೆ ಬಳಸಿದ್ದ ಕಾರು ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News