×
Ad

ಬಜ್ಪೆ: ಕಳ್ಳತನ ಆರೋಪ; ಇಬ್ಬರು ಅಪ್ರಾಪ್ತರ ಬಂಧನ

Update: 2024-06-15 15:06 IST

ಬಜ್ಪೆ: ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳವು ಮಾಡುತ್ತಿದ್ದ ಆರೋಪದಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರನ್ನು ಪೊಲೀಸರು ವಶಕ್ಕೆ ಬಂಧಿಸಿದ್ದಾರೆ.

ಬಂಧಿತರಿಬ್ಬರೂ ಸೂರಲ್ಪಾಡಿಯವರು ಎಂದು ತಿಳಿದು ಬಂದಿದ್ದು, ಇವರಿಂದ ಒಂದು ಪಲ್ಸರ್‌ ಬೈಕ್‌ ಹಾಗೂ 30 ಸಾವಿರ ರೂ. ಮೌಲ್ಯದ ಬೆಳ್ಳಿಯ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಒಂದು ವಾರದ ಹಿಂದೆ ತೆಂಕ ಎಕ್ಕಾರಿನಲ್ಲಿರುವ ಮೆಸ್ಕಾಂ ಸಿಬ್ಬಂದಿಯೊಬ್ಬರ ಮನೆಯಲ್ಲಿ ಬೆಳ್ಳಿಯ ದೇವರ ಪೂಜಾ ವಸ್ತುಗಳು ಕಳವಾಗಿತ್ತು. ಈ ಸಂಬಂಧ ಅವರು ಬಜ್ಪೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು.

ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಬಾಲಕರನ್ನು ಬಾಲ ನ್ಯಾಯ ಮಂಡಳಿಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News