ಬಜ್ಪೆ : ಯುನಿವೆಫ್ ನಿಂದ ಸೀರತ್ ಸಮಾವೇಶ
Update: 2025-10-14 08:09 IST
ಮಂಗಳೂರು: ಯುನಿವೆಫ್ ಕರ್ನಾಟಕ 19 ಸೆಪ್ಟೆಂಬರ್ 2025 ರಿಂದ 2 ಜನವರಿ 2026 ರ ವರೆಗೆ 100 ದಿನಗಳ ಕಾಲ ಹಮ್ಮಿಕೊಂಡಿರುವ 20 ನೇ ವರ್ಷದ "ಅರಿಯಿರಿ ಮನುಕುಲದ ಪ್ರವಾದಿಯನ್ನು" ಅಭಿಯಾನದ ಸೀರತ್ ಸಮಾವೇಶವು ಬಜ್ಪೆ ಲೈಕೋರಿಸ್ ಫ್ಲ್ಯಾಟ್ ಬಳಿ ಶುಕ್ರವಾರ ನಡೆಯಿತು.
ಮುಖ್ಯ ಅತಿಥಿಯಾಗಿ ದ. ಕ. ಮುಸ್ಲಿಮ್ ಜನಪ್ರತಿನಿಧಿಗಳ ಒಕ್ಕೂಟದ ಅಧ್ಯಕ್ಷ ಜನಾಬ್ ಸಿರಾಜ್ ಬಜ್ಪೆ ಭಾಗವಹಿಸಿದ್ದರು. ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಮುಖ್ಯ ಭಾಷಣ ಮಾಡಿದರು.
ಅಭಿಯಾನ ಸಂಚಾಲಕ ಯು. ಕೆ. ಖಾಲಿದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅತೀಖುರ್‍ರಹ್ಮಾನ್ ಕಿರಾಅತ್ ಪಠಿಸಿದರು. ಸಹ ಸಂಚಾಲಕ ಉಬೈದುಲ್ಲಾ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಬಜ್ಪೆ ಅಧ್ಯಕ್ಷ ಅಬ್ದುರ್‍ರಹ್ಮಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.