×
Ad

ಬಜ್ಪೆ: ವಿದ್ಯುತ್‌ ಕಂಬಕ್ಕೆ ಆಟೋ ರಿಕ್ಷಾ ಢಿಕ್ಕಿ ಹೊಡೆದು ಯುವತಿ ಮೃತ್ಯು

Update: 2023-09-18 12:24 IST

ಬಜ್ಪೆ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಯುವತಿ ಸ್ಥಳದಲ್ಲಿಯೇ ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಗುರುಪುರ-ಬಂಗ್ಲೆಗುಡ್ಡೆ ಅಣೆಬಳಿಯ ಒಳ ರಸ್ತೆಯಲ್ಲಿ ನಡೆದಿದೆ.

ಮೃತ ಯುವತಿಯನ್ನು ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಪಲಿಗ (25) ಎಂದು ಗುರುತಿಸಲಾಗಿದೆ. ಪ್ರೀತಿಯವರ ತಾಯಿ ಮೀನಾಕ್ಷಿ (55), ತಂಗಿ ಸ್ವಾತಿ (23), ಅತ್ತಿಗೆ ಶೋಭಾ (37), ಶೋಭಾ ಅವರ ಪುತ್ರ ಭವಿಷ್‌ (9) ಹಾಗೂ ಆಟೋ ಚಾಲಕ ಪದ್ಮನಾಭ ಎಂಬವರು ಗಾಯಗೊಂಡಿದ್ದಾರೆ. ಮೀನಾಕ್ಷಿ ಅವರ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News