×
Ad

BANTWAL | ಅಕ್ರಮ ಜಾನುವಾರು ವಧಾ ಕೇಂದ್ರಕ್ಕೆ ದಾಳಿ: ಆರೋಪಿಯ ಬಂಧನ

Update: 2025-11-17 11:17 IST

ಬಂಟ್ವಾಳ: ಅಕ್ರಮ ಜಾನುವಾರು ವಧಾ ಕೇಂದ್ರ ನಡೆಸುತ್ತಿದ್ದ ಆರೋಪದಲ್ಲಿ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ಅರಳ ಗ್ರಾಮದಲ್ಲಿ ರವಿವಾರ ನಡೆದಿದೆ.

ಮಯ್ಯದ್ದಿ(57) ಬಂಧಿತ ಆರೋಪಿ. ಈತ ತನ್ನ ಮನೆಯ ಆವರಣದಲ್ಲಿರುವ ಶೆಡ್ ಬಳಿ ಜಾನುವಾರುಗಳನ್ನು ಕಟ್ಟಿಕೊಂಡು ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿಯನ್ನು ಆಧರಿಸಿ ದಾಳಿ ಮಾಡಿರುವುದಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ದಾಳಿ ವೇಳೆ ಮನೆಯ ಬಳಿಯ ಶೆಡ್ಡಿನಲ್ಲಿ ಮೂವರು ದನವನ್ನು ವಧೆ ಮಾಡಿ ಮಾಂಸ ಮಾಡುತ್ತಿದ್ದರು. ಪೊಲೀಸರನ್ನು ಗಮನಿಸಿ ಇಬ್ಬರು ಪರಾರಿಯಾಗಿದ್ದಾರೆ. ಆರೋಪಿ ಮಯ್ಯದ್ದಿಯನ್ನು ವಶಕ್ಕೆ ಪಡೆಯಲಾಗಿದ್ದು, ಶೆಡ್ಡಿನಲ್ಲಿದ್ದ ಮೂರು ಹಸುಗಳನ್ನು ಮತ್ತು ಒಂದು ಕರುವನ್ನು ರಕ್ಷಿಸಲಾಗಿದೆ. ಸುಮಾರು 150 ಕೆಜಿ ದನದ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮನೆ ಜಪ್ತಿ

ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೇ ಮನೆಯ ಆವರಣದ ಶೆಡ್ಡಿನಲ್ಲಿ ಕಸಾಯಿಖಾನೆ ನಿರ್ಮಿಸಿ ಮನೆಯಿಂದಲೇ ವಿದ್ಯುತ್ ಸಂಪರ್ಕ ಪಡೆದು ಜಾನುವಾರುಗಳ ವಧೆ ಮಾಡುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮನೆ ಹಾಗೂ ಶೆಡ್ಡಿನ ಆವರಣವನ್ನು ಪೊಲೀಸರು ಜಪ್ತಿ ಮಾಡಿದ್ದು, ಮುಟ್ಟುಗೋಲು ಮಾಡುವ ಬಗ್ಗೆ ಮಂಗಳೂರು ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿಗಳಿಗೆ ವರದಿ ಸಲ್ಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News