Bantwal | ಬೈಕ್‌ಗೆ ಕಾರು ಢಿಕ್ಕಿ: ಸವಾರ ಮೃತ್ಯು
Update: 2025-12-29 23:52 IST
ಬಂಟ್ವಾಳ: ಬೈಕ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ಪೂಂಜಾಲಕಟ್ಟೆ ಸಮೀಪದ ಕಟ್ಟೆಮನೆ ಎಂಬಲ್ಲಿ ಸಂಭವಿಸಿದೆ.
ಕುಕ್ಕಾಜೆ ನಿವಾಸಿ ಇಮ್ರಾನ್ ಯಾನೆ ಎಸ್.ಎ.ಮುಹಮ್ಮದ್ ತ್ವಾಹಾ ಮೃತಪಟ್ಟವರು.
ಘಟನೆಯಲ್ಲಿ ಗಂಭೀರ ಗಾಯಗೊಂಡ ಇಮ್ರಾನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಡಿಸಿಆರ್‌ಇ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಸನ್ನ ಎಂಬವರು ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.