ಬಂಟ್ವಾಳ : ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ
Update: 2026-01-15 18:38 IST
ಬಂಟ್ವಾಳ : ಕಳೆದ ಎರಡು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ತಲೆಕ್ಕಿ ಮಹಮ್ಮದ್ ಹಾಜಿ (70) ಅವರ ಮೃತದೇಹ ಬುಧವಾರ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ-ಕೇರಳ ಗಡಿ ಭಾಗದ ಬಾಕ್ರಬೈಲು ತಲೆಕ್ಕಿ ಪರಿಸರದ ಬೊಳ್ಮಾರ್ ನಿವಾಸಿ ಮುಹಮ್ಮದ್ ಹಾಜಿ ಎರಡು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದರು.
ಮನೆಯವರು ಎಲ್ಲಾ ಕಡೆ ಹುಡುಕಾಡಿದ್ದರೂ ಯಾವುದೇ ಸುಳಿವು ಸಿಗಲಿಲ್ಲ. ಬುಧವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಗೂಡಿನಬಳಿ ನೇತ್ರಾವತಿ ನದಿಯಲ್ಲಿ ಮಹಮ್ಮದ್ ಹಾಜಿಯವರ ಮೃತದೇಹ ಪತ್ತೆಯಾಗಿದೆ. ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.
ಬಂಟ್ವಾಳ ನಗರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.