×
Ad

ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಬಂಟ್ವಾಳದ ಯುವಕ ಮೃತ್ಯು

Update: 2025-12-09 21:30 IST

ಮುಹಮ್ಮದ್ ಹಾರಿಸ್ 

ಬೆಂಗಳೂರು: ಬೆಂಗಳೂರಿನ ಕೂಡ್ಲು ಗೇಟ್ ಸಮೀಪ ಮಧ್ಯಾಹ್ನ ನಡೆದ ರಸ್ತೆ ಅಪಘಾತವೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜಿಲಮೊಗರು ಸಮೀಪದ ಅಲ್ಲಿಪಾದೆ ಎಂಬಲ್ಲಿನ ಯುವಕ ಮುಹಮ್ಮದ್ ಹಾರಿಸ್ (34) ಮೃತಪಟ್ಟ ಯುವಕ.

ಮುಹಮ್ಮದ್ ಹಾರಿಸ್ ಬೆಂಗಳೂರಿನ ಏಸಿ ಕಂಪನಿಯೊಂದರಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದು, ಕೆಲಸದ ನಿಮಿತ್ತ ಇಂದು ತನ್ನ ಸಹೋದ್ಯೋಗಿಯೋರ್ವನೊಡನೆ ಬೈಕಿನಲ್ಲಿ ತೆರಳುತ್ತಿದ್ದಾಗ  ಗೂಡ್ಸ್ ವಾಹನವು ಹಿಂಬದಿಯಿಂದ ಢಿಕ್ಕಿಯಾಗಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಹಾರಿಸ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹಿಂಬದಿಯಲ್ಲಿದ್ದ ಸಹೋದ್ಯೋಗಿಗೆ ಗಂಭೀರವಾಗಿ ಗಾಯವಾಗಿದೆ ಎಂದು ತಿಳಿದುಬಂದಿದೆ.

ಯುವಕ ಹಾರಿಸ್ ಆರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು.

ಘಟನೆಯ ಸಂಬಂಧ ಎಚ್‌ ಎಸ್‌ ಆರ್ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯುವಕ ಹಾರಿಸ್ ಮೃತದೇಹವು ಕೋರಮಂಗಲದಲ್ಲಿರುವ ಸೈಂಟ್ ಜಾನ್ಸ್‌ ಆಸ್ಪತ್ರೆಯ ಶವಾಗಾರದಲ್ಲಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಊರಿಗೆ ಕಳುಹಿಸಲಾಗುವುದು ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡಿರುವ ಹಿಂಬದಿ ಸವಾರ ಒಡಿಶಾ ಮೂಲದವನಾಗಿದ್ದು, ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News