×
Ad

ಬಂಟ್ವಾಳ : ಧರ್ಮನಿಂದನೆ ಆರೋಪ; ಶರಣ್ ಪಂಪ್ವೆಲ್, ಭರತ್ ಕುಮ್ಡೇಲು, ಯಶೋಧರ ಕರ್ಬೆಟ್ಟು ವಿರುದ್ಧ ದೂರು ದಾಖಲು

Update: 2024-09-17 14:32 IST

ಬಂಟ್ವಾಳ : ಧರ್ಮನಿಂದನೆ, ಕೋಮು ಪ್ರಚೋದನಾಕಾರಿ ಹೇಳಿಕೆಯನ್ನು ನೀಡಿ ಶಾಂತಿ ಮತ್ತು ನೆಮ್ಮದಿಯನ್ನು ಕದಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲು ಅವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಸೆ.16 ರಂದು ಬಿ.ಸಿ.ರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಭಜರಂಗದಳ- ವಿಎಚ್.ಪಿ ಯವರ ಬಿಸಿರೋಡು ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶರಣ್ ಪಂಪ್ ವೆಲ್ ಹಾಗೂ ಭರತ್ ಕುಮ್ಡೇಲು ಅವರು ಮುಸ್ಲಿಂ ಸಮುದಾಯದ ಭಾವನೆಗೆ ಮತ್ತು ಧರ್ಮದ ಘನತೆಗೆ ಧಕ್ಕೆ ಉಂಟಾಗುವಂತೆ ಪ್ರಚೋದನಾಕಾರಿ ಭಾಷಣಮಾಡಿದ್ದಾರೆ. ಹಿಂದೂ ಮತ್ತು ಮುಸ್ಲಿಂ ಸಮುದಾಯದ ನಡುವೆ ದ್ವೇಷ ಸಂಘರ್ಷ ಉಂಟಾಗುವ ರೀತಿಯಲ್ಲಿ ಮಾತನಾಡಿದ್ದಲ್ಲದೆ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ ಎಂದು ಬಿ.ಮೂಡ ಗ್ರಾಮದ ಬಂಟ್ವಾಳ ಕೆಳಗಿನ ಪೇಟೆ ನಿವಾಸಿ ಮಹಮ್ಮದ್ ರಫೀಕ್ ಎಂಬವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಯಶೋಧರ ಕರ್ಬೆಟ್ಟು ವಿರುದ್ಧ ದೂರು

ಮುಸ್ಲಿಂ ಧರ್ಮವನ್ನು ನಿಂದಿಸಿ ಕೊಲೆ ಬೆದರಿಕೆ ಹಾಕಿದ ಯಶೋಧರ ಕರ್ಬೆಟ್ಟು ಎಂಬಾತನ ಮೇಲೆ ಕಾನೂನು ಕ್ರಮ ಜರಗಿಸುವಂತೆ ಬಂಟ್ವಾಳ ನಿವಾಸಿ ಮಹಮ್ಮದ್ ನವಾಜ್ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದು ಈತನ ವಿರುದ್ಧವೂ ದೂರು ದಾಖಲಾಗಿದೆ.

ಬಂಟ್ವಾಳ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News