×
Ad

ಬಂಟ್ವಾಳ: ಲಾರಿಗಳ ನಡುವೆ ಮುಖಾಮುಖಿ ಢಿಕ್ಕಿ; ಓರ್ವ ಚಾಲಕನಿಗೆ ಗಾಯ

Update: 2023-12-22 17:39 IST

ಬಂಟ್ವಾಳ: ಪಾಣೆಮಂಗಳೂರು ಸಮೀಪದ ತಿರುವಿನಲ್ಲಿ ಲಾರಿಗಳೆರಡು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಓರ್ವ ಚಾಲಕ ಗಂಭೀರ ಗಾಯಗೊಂಡಿದ್ದು, ಲಾರಿಯಲ್ಲಿದ್ದ ಆಯಿಲ್ ರಸ್ತೆಯಲ್ಲಿ ಪೂರ್ತಿಯಾಗಿ ಚೆಲ್ಲಿ ಹೆದ್ದಾರಿಯಲ್ಲಿ ತಾಸುಗಟ್ಟಲೆ ವಾಹನ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಶುಕ್ರವಾರ ನಡೆದಿದೆ.

ಗಂಭೀರ ಗಾಯಗೊಂಡ ಓರ್ವ ಚಾಲಕನನ್ನು ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಟ್ರಾಫಿಕ್ ಎಸ್.ಐ. ಅಗ್ನಿಶಾಮಕ ದಳವನ್ನು ಸ್ಥಳಕ್ಕೆ ಕರೆಸಿ ನೀರು ಹಾಯಿಸುವ ಮೂಲಕ ತೈಲವನ್ನು ಶುಚಿಗೊಳಿಸುವ ಕಾರ್ಯ ನಡೆಸಿದರು. ಪೊಲೀಸರು ಸ್ಥಳದಲ್ಲಿದ್ದು ಸಹಕರಿಸಿದರು.

ತೈಲ ಶುಚಿಯಾದ ಬಳಿಕ ಅಪಘಾತಕ್ಕೊಳಗಾದ ಲಾರಿಗಳೆರಡನ್ನು ಕ್ರೇನ್ ಮೂಲಕ ಬದಿಗೆ ಸರಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.




Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News