×
Ad

ಬಂಟ್ವಾಳ: ಅಕ್ರಮ ಮರಳು ಸಾಗಾಟ; ಪ್ರಕರಣ ದಾಖಲು

Update: 2024-06-13 15:08 IST

ಬಂಟ್ವಾಳ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಬಂಟ್ವಾಳ ನಗರ ಪೊಲೀಸರು ಬೇಧಿಸಿದ ಘಟನೆ ಪಾಣೆಮಂಗಳೂರು ಸಾಗರ್ ಆಡಿಟೋರಿಯಂ ಬಳಿ ಬುಧವಾರ ನಡೆದಿದೆ.

ಪಾಣೆಮಂಗಳೂರು ಸಾಗರ್ ಅಡಿಟೋರಿಯಂ ಬಳಿ ಬಿ.ಸಿ.ರೋಡು ಕಡೆಯಿಂದ ಚಲಾಯಿಸಿಕೊಂಡು ಬರುತ್ತಿದ್ದ ಟಿಪ್ಪರ್ ಲಾರಿಯನ್ನು ಬಂಟ್ವಾಳ ನಗರ ಪೊಲೀಸ್ ಠಾಣಾಧಿಕಾರಿ ರಾಮಕೃಷ್ಣ ನೇತೃತ್ವದ ಪೊಲೀಸರು ತಪಾಸಣೆಗಾಗಿ ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಈ ಅಕ್ರಮ ಮರಳು ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ.

ಈ ಬಗ್ಗೆ ಲಾರಿ ಚಾಲಕ ಕಬಕ ನಿವಾಸಿ ಮುಹಮ್ಮದ್ ಸಫ್ವಾನ್ (24) ಎಂಬಾತನಲ್ಲಿ ವಿಚಾರಿಸಿದಾಗ, ವಳಚ್ಚಿಲ್ ಎಂಬಲ್ಲಿನ ನೇತ್ರಾವತಿ ನದಿಯಿಂದ ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೇ ಮರಳು  ಸಾಗಿಸುತ್ತಿರುವುದಾಗಿ ತಿಳಿಸಿದ್ಧಾರೆ ಎಂದು ತಿಳಿದು ಬಂದಿದೆ.

ಈ ಹಿನ್ನಲೆಯಲ್ಲಿ ಲಾರಿಯನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಆರೋಪಿ ಲಾರಿ ಚಾಲಕನ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News