×
Ad

ಬಂಟ್ವಾಳ| ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಕೆಎಸ್ಸಾರ್ಟಿಸಿ ಬಸ್‌

Update: 2024-09-23 19:15 IST

ಬಂಟ್ವಾಳ: ಧರ್ಮಸ್ಥಳ‌ - ಮಂಗಳೂರು  ಮಧ್ಯೆ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ವಗ್ಗ ಸಮೀಪದ ಕೊಪ್ಪಳದಲ್ಲಿ ಸೋಮವಾರ ಸಂಜೆ ನಡೆದಿದೆ.

ಘಟನೆಯಲ್ಲಿ ಬಸ್ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಯುವಕರು ಬಸ್ಸಿನಿಂದ ಪ್ರಯಾಣಿಕರನ್ನು ಹೊರಗೆ ತೆಗೆಯಲು ಸಹಕರಿಸಿದ್ದು‌, ಗಾಯಗೊಂಡವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಬಸ್ ಧರ್ಮಸ್ಥಳದಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.





Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News