×
Ad

ಬಂಟ್ವಾಳ: ನಾಪತ್ತೆಯಾಗಿದ್ದ ಯುವ ಜೋಡಿ ಪತ್ತೆ

Update: 2023-11-29 12:53 IST

ಬಂಟ್ವಾಳ, ನ.29: ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಸಜಿಪ ಮುನ್ನೂರು ಗ್ರಾಮದ ಉದ್ದೊಟ್ಟು ಎಂಬಲ್ಲಿಂದ ನಾಪತ್ತೆಯಾಗಿದ್ದ ಯುವ ಜೋಡಿಯನ್ನು ಪೊಲೀಸರು ಕೇರಳದಲ್ಲಿ ಪತ್ತೆ ಹಚ್ಚಿದ್ದಾರೆ.

ಉದ್ದೊಟ್ಟು ನಿವಾಸಿ ಅಬ್ದುಲ್ ಹಮೀದ್ ಅವರ ಪುತ್ರಿ ಆಯಿಸತ್ ರಸ್ಮಾ (18) ಮತ್ತು ಹೈದರ್ ಎಂಬವರ ಪುತ್ರ ಮುಹಮ್ಮದ್ ಸಿನಾನ್ (23) ನ.23ರಂದು ಮನೆಯಿಂದ ಕಾಣೆಯಾಗಿದ್ದರು. ಇವರಿಬ್ಬರು ನೆರೆಕರೆಯ ಮನೆಯವರಾಗಿದ್ದರು.

ಈ ಬಗ್ಗೆ ಎರಡು ಮನೆಯವರ ಪೋಷಕರು ನ.26ರಂದು ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದರು.

ಬಂಟ್ವಾಳ ನಗರ ಠಾಣಾ ನಿರೀಕ್ಷಕ ಅನಂತ ಪದ್ಮನಾಭ ರ ನಿರ್ದೇಶನದಂತೆ ಠಾಣಾಧಿಕಾರಿ ಎಸ್ಸೈ ರಾಮಕೃಷ್ಣ ತಂಡವು ನಾಪತ್ತೆಯಾದ ಯುವ ಜೋಡಿಯನ್ನು ಕೇರಳ ರಾಜ್ಯದ ಕಾಂಞಗಾಡ್ ನಲ್ಲಿರುವುದನ್ನು ಪತ್ತೆ ಹಚ್ಚಿದ್ದಾರೆ. ಅವರನ್ನು ನ.28ರಂದು ಬಂಟ್ವಾಳ ನಗರ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಈ ಸಂದರ್ಭ ಯುವಕ ಮತ್ತು ಯುವತಿ ನಾವಿಬ್ಬರೂ ಪರಸ್ಪರ ಪ್ರೇಮಿಸುತ್ತಿದ್ದು ಮದುವೆಯಾಗುವುದಾಗಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಯುವತಿಯನ್ನು ಯುವಕನ ಜೊತೆಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News