ಬಂಟ್ವಾಳ : ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Update: 2023-08-13 22:20 IST
ಕೃಷ್ಣ
ಬಂಟ್ವಾಳ : ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪುದು ಗ್ರಾಮದ ಕುಮ್ಡೆಲು ನಿವಾಸಿ ಕೃಷ್ಣ ಬಂಧಿತ ಆರೋಪಿ.
ಕಳ್ಳತನ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ ಜಾಮೀನು ಮೇಲೆ ಬಿಡುಗಡೆಗೊಂಡಿದ್ದ ಈತ ಅ ಬಳಿಕ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಈತನನ್ನು ಪೊಲೀಸ್ ನಿರೀಕ್ಷಕ ಎಚ್. ನಾಗರಾಜ್ ಅವರ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣಾಧಿಕಾರಿ ಹರೀಶ್ ಹಾಗೂ ಸಿಬ್ಬಂದಿಗಳಾದ ಗಣೇಶ್ ಪ್ರಸಾದ್, ರಾಧಾಕೃಷ್ಣನ್, ಯೋಗೇಶ್ ಡಿ.ಎಲ್, ಹಾಗೂ ವಿಜಯ್ ರವರು ಮಾಹಿತಿ ಸಂಗ್ರಹಿಸಿ ಬಡಗ ಮಿಜಾರು ಎಂಬಲ್ಲಿ ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡಿದ್ದರು.