×
Ad

ಬಂಟ್ವಾಳ: ಸಾಮಾಜಿಕ ಕಾರ್ಯಕರ್ತನ ಮೃತದೇಹ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ

Update: 2024-03-31 13:31 IST

ಬಂಟ್ವಾಳ, ಮಾ.31: ಸಾಮಾಜಿಕ ಕಾರ್ಯಕರ್ತರೊಬ್ಬರ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ವಾಮದಪದವು ಎಂಬಲ್ಲಿ ನಡೆದಿದೆ.

ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಉಪಾಧ್ಯಕ್ಷ, ಸಾಮಾಜಿಕ ಕಾರ್ಯಕರ್ತ ಪದ್ಮನಾಭ ಸಾಮಂತ್ ಮೃತಪಟ್ಟವರು.

ವಾಮದಪದವಿನ ಅವರ ಮನೆ ಬಳಿಯ ಗುಡ್ಡದಲ್ಲಿ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪದ್ಮನಾಭರ ಮೃತದೇಹ ಪತ್ತೆಯಾಗಿದೆ.

ವಿವಿಧ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಪದ್ಮನಾಭ ಸಾಮಂತ್ ಅವರ ಸಾವು ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ.

ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News