×
Ad

ಬಿ.ಸಿ.ರೋಡ್ : ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಚಾಲಕ ಮೃತ್ಯು

Update: 2025-05-27 10:47 IST

ಬಂಟ್ವಾಳ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆ.75ರ ಬಿ.ಸಿ.ರೋಡ್- ಕೈಕಂಬದ ಸಮೀಪ ಮಂಗಳವಾರ ಮುಂಜಾನೆ 4 ಗಂಟೆ ಸುಮಾರಿಗೆ ಸಂಭವಿಸಿದೆ.

 

ಮೃತರನ್ನು ಮಂಚಿ ಗ್ರಾಮದ ಭಂಡಾರಕೊಟ್ಟಿಗೆ ನಿವಾಸಿ ಜಯರಾಮ್ (50) ಎಂದು ಗುರುತಿಸಲಾಗಿದೆ.

ಜಯರಾಮ್ ಅವರು ತುಂಬೆ ಖಾಸಗಿ ಆಸ್ಪತ್ರೆಯ ಕ್ಯಾಂಟೀನ್ ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. ಇಂದು ಮುಂಜಾನೆ ಇವರು ಮನೆಯಿಂದ ಕಾರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News