ಮೇ 24ರಂದು ಬ್ಯಾರೀಸ್ ಕ್ಯಾಂಪಸ್ ಕನೆಕ್ಟ್ 2025
ಮಂಗಳೂರು, ಮೇ 22: ನಗರದ ಹೊರವಲಯದ ಇನೋಳಿ ಬಳಿಯ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್‌ನಲ್ಲಿ ಮೇ 24ರಂದು ಬ್ಯಾರೀಸ್ ಕ್ಯಾಂಪಸ್ ಕನೆಕ್ಟ್ ಎಂಬ ಕಾರ್ಯಕ್ರಮ ನಡೆಯಲಿದೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿಐಟಿ ಪ್ರಾಂಶುಪಾಲ ಡಾ. ಎಸ್.ಐ. ಮಂಜೂರ್ ಬಾಷಾ ಅವರು, ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಣ ತಜ್ಞರನ್ನು ಒಳಗೊಂಡ ಕಲಿಕೆ, ಅನ್ವೇಷಣೆ ಮತ್ತು ಸಂಭ್ರಮದ ಕಾರ್ಯಕ್ರಮ ಇದಾಗಿದೆ ಎಂದರು.
ಬೆಳಗ್ಗೆ 9.30ಕ್ಕೆ ಆರಂಭಗೊಳ್ಳುವ ಕಾರ್ಯಕ್ರಮದಲ್ಲಿ ಸಿಗ್ಮಾ ಇಂಡಿಯಾದ ಸಂಸ್ಥಾಪಕ ಮತ್ತು ಸಿಇಒ ಅಮೀನ್ ಎ. ಮುದಸ್ಸರ್‌ರಿಂದ ಪ್ರೇರಣಾದಾಯಕ ವೃತ್ತಿ ಮಾರ್ಗದರ್ಶನ ಮತ್ತು ಸಲಹಾ ಕಾರ್ಯಾಗಾರ ನಡೆಯಲಿದೆ. ಬ್ಯಾರೀಸ್ ಅಕಾಡೆಮಿ ಆಫ್ ಲರ್ನಿಂಗ್‌ನ ಅಧಯಕ್ಷ ಸೈಯ್ಯದ್ ಮುಹಮ್ಮದ್ ಬ್ಯಾರಿ ಅಧ್ಯಕ್ಷತೆ ವಹಿಸಲಿದ್ದು, ಗೌರವ ಅತಿಥಿಯಾಗಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಭಾಗವಹಿಸಲಿದ್ದಾರೆ.
ಎಸೆಸೆಲ್ಸಿ, ಪಿಯುಸಿ, ಹಾಗೂ ಡಿಪ್ಲೊಮಾ ಪದವೀಧರ ವಿದ್ಯಾರ್ಥಿಗಳಿಗೆ ಸೂಕ್ತ ವೃತ್ತಿ ಮಾರ್ಗದ ಆಯ್ಕೆ ಮತ್ತು ಭವಿಷ್ಯದ ನಿರ್ಧಾರಗಳ ಬಗ್ಗೆ ಮಾರ್ಗದರ್ಶನ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ಅರಿವು, ಸರಕಾರಿ ವಿದ್ಯಾರ್ಥಿ ವೇತನ ಮತ್ತು ಹಾಸೆಲ್ಟ್ ಸೌಲಭ್ಯಗಳ ಮಾಹಿತಿ, ಎಸೆಸೆಲ್ಸಿ- ಪಿಯುಸಿ ಹಾಗೂ ಡಿಪ್ಲೊಮಾದ ಟಾಪರ್‌ಗಳಿಗೆ ಗೌರವ, ವಿವಿಧ ವಿದ್ಯಾರ್ಥಿಗಳ ಸೃಜನಶೀಲ ಪ್ರಾಜೆಕ್ಟ್‌ಗಳ ಪ್ರದರ್ಶನ, ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ಭಗಾವಹಿಸಲು ಪ್ರೋತ್ಸಾಹದ ಜತೆಗೆ ಕಾರ್ಯಕ್ರಮದಲ್ಲಿ ಆಹಾರ ಮೇಳವನ್ನೂ ಆಯೋಜಿಸಲಾಗಿದೆ ಎಂದು ಅವರು ಹೇಳಿದರು.
ಗೋಷ್ಟಿಯಲ್ಲಿ ಬೀಡ್ಸ್ ಪ್ರಾಂಶುಪಾಲ ಆರ್. ಖಲೀಲ್ ರಝಾಕ್, ಬ್ಯಾರೀಸ್ ಪಿಯುಸಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಅಬ್ದುಲ್ ಲತೀಫ್ ಬಿ.ಕೆ., ಪೃಥ್ವಿರಾಜ್ ಉಪಸ್ಥಿತರಿದ್ದರು.