×
Ad

ಬೆಳ್ಳಾರೆ: ಜಾಗದ ವಿಚಾರಕ್ಕೆ ಸಂಬಂಧಿಸಿ ಹೆತ್ತವರ ಮೇಲೆ ಹಲ್ಲೆ; ಆರೋಪಿ ಮಗನ ಬಂಧನ

Update: 2023-11-21 11:25 IST

Photo: freepike

ಸುಳ್ಯ: ತಂದೆ-ತಾಯಿಯ ಮೇಲೆ ಮಗ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಕೊಡಿಯಾಲ ಗ್ರಾಮದ ಕಲ್ಲಗದ್ದೆ ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿಗಳಾದ ಮಂಜುನಾಥ್ ಆಚಾರ್, ಧರ್ಮಾವತಿ ಗಾಯಗೊಂಡ ದಂಪತಿಗಳು. ಹಲ್ಲೆ ಮಾಡಿದ ಮಗ ದೇವಿಪ್ರಸಾದ್‌ನನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಜಾಗದ ವಿಚಾರವಾಗಿ ಮನೆಯಲ್ಲಿ ಜಗಳ ನಡೆದಿದ್ದು, ಈ ವೇಳೆ ಮಗ ತಂದೆ-ತಾಯಿ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಗಂಭೀರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News