×
Ad

ಬೆಳ್ಳಾರೆ: ಅಕ್ರಮ ಗೋಸಾಗಾಟ ಆರೋಪ; ಇಬ್ಬರ ಬಂಧನ

Update: 2025-07-29 22:49 IST

ಸುಳ್ಯ: ಅಕ್ರಮ ಗೋಸಾಗಾಟವನ್ನು ಪತ್ತೆ ಹಚ್ಚಿರುವ ಬೆಳ್ಳಾರೆ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ಮಂಗಳವಾರ ನಡೆದಿದೆ.

ಹಾಸನ ಕಡೆಯಿಂದ ಸುಬ್ರಹ್ಮಣ್ಯ ಮಾರ್ಗವಾಗಿ ಪಂಜ - ಬೆಳ್ಳಾರೆ - ನೆಟ್ಟಾರು ಮಾರ್ಗವಾಗಿ ಈಶ್ವರಮಂಗಲಕ್ಕೆ 5 ಎಮ್ಮೆಗಳನ್ನು ಪಿಕಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಬೆಳ್ಳಾರೆ ಪೊಲೀಸರು ನೆಟ್ಟಾರಿನಲ್ಲಿ ಪಿಕಪ್ ಅನ್ನು ತಡೆದು ನಿಲ್ಲಿಸಿ ಇಬ್ಬರು ಆರೋಪಿಗಳು, 5 ಎಮ್ಮೆಗಳನ್ನು ಪಿಕಪ್ ಸಮೇತ ವಶಪಡಿಸಿಕೊಂಡಿದ್ದಾರೆ.

ಕಾಸರಗೋಡಿನ ದೇಲಂಪಾಡಿ ಮುಜಾಮಿನ್, ಅಬ್ದುಲ್ಲ ಬಂಧಿತ ಆರೋಪಿಗಳು. ಆರೋಪಿಗಳನ್ನು ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬೆಳ್ಳಾರೆ ಎಸೈ ಸಂತೋಷ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News