×
Ad

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ವಿರುದ್ಧ ಮತ್ತೊಂದು ಪ್ರಕರಣ ದಾಖಲು‌

Update: 2023-10-27 17:10 IST

ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಆರೋಪದ ಅಡಿಯಲ್ಲಿ ಮಾಜಿ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ‌.

ಕಲೆಕ್ಷನ್ ಮಾಸ್ಟರ್ (ಸಿ.ಎಂ) ಆಫ್ ಕರ್ನಾಟಕ ಎಂದು ಬರೆದು ಸಿ.ಎಂ ಸಿದ್ದರಾಮಯ್ಯ ಅವರ ಮತ್ತು ಬೆಂಗಳೂರಿನ ಸಿ.ಎಂ ನಿವಾಸದ ಫೊಟೋವನ್ನು ಫೇಸ್ ಬುಕ್‌ ನಲ್ಲಿ ಶಾಸಕ ಹರೀಶ್ ಪೂಂಜ ಪೋಸ್ಟ್ ಮಾಡಿದ್ದರು.

ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡ, ಮಾಜಿ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ ಅವರು ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ IPC 1896u/s 504, 505(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.




 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News