×
Ad

ಬೆಳ್ತಂಗಡಿ| ಬೆಂಕಿ ಆಕಸ್ಮಿಕ; ಚಾರ್ಮಾಡಿ ಘಾಟಿ ಮಧ್ಯೆ ಹೊತ್ತಿ ಉರಿದ ಮೆಕ್ಕೆ ಜೋಳ ಸಾಗಾಟದ ಲಾರಿ

Update: 2026-01-10 07:46 IST

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಮೆಕ್ಕೆ ಜೋಳ ಸಾಗಾಟದ ಲಾರಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಶನಿವಾರ ಬೆಳಗ್ಗಿನ ಜಾವ 3 ಗಂಟೆಯ ವೇಳೆ ಸಂಭವಿಸಿದೆ.

ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಹಾಗು ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.  ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ.

ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್‌ನಲ್ಲಿ ಜಾವಗಲ್‌ನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಮೆಕ್ಕೆಜೋಳ ಸಾಗಾಟದ ಲಾರಿಗೆ ತಾಂತ್ರಿಕ ಅಡಚಣೆಯಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. 

ಲಾರಿಯ ಟಯರ್ ನ ಭಾಗದಿಂದ ಆರಂಭವಾದ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಲಾರಿಗೆ ವ್ಯಾಪಿಸಿ ಲಾರಿಯಲ್ಲಿದ್ದ ಮೆಕ್ಕೆಜೋಳ  ಸಹಿತ ಲಾರಿಯೂ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಬೆಂಕಿಯ ತೀವ್ರತೆಯಿಂದ ಘಾಟ್‌ನ ಅರಣ್ಯ ಪ್ರದೇಶಕ್ಕೂ ಅಗ್ನಿ ವ್ಯಾಪಿಸಿದ್ದು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಘಟನೆ ವೇಳೆ ಲಾರಿಯಲ್ಲಿದ್ದ ಚಾಲಕ ಸೇರಿದಂತೆ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದು, ಹೆಚ್ಚಿನ ಅನಾಹುತ ತಪ್ಪಿಸಲಾಗಿದೆ. ಘಟನೆ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News