×
Ad

ಬೆಳ್ತಂಗಡಿ: ಭಾರೀ ಮಳೆಗೆ ಮುಂಡಾಜೆಯಲ್ಲಿ ಗುಡ್ಡ ಕುಸಿತ; ರಸ್ತೆ ಸಂಚಾರ ಬಂದ್

Update: 2024-10-14 11:07 IST

ಬೆಳ್ತಂಗಡಿ: ಮುಂಡಾಜೆಯಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ರಸ್ತೆ ಹಾಗೂ ಮನೆಯ ಮೇಲೆ ಬಿದ್ದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ರಸ್ತೆಯಲ್ಲಿ ವಾಹನ ಹಾಗೂ ಜನರ ಸಂಚಾರಕ್ಕೆ ಅನಾನುಕೂಲವಾಗುವ ರೀತಿಯಲ್ಲಿ ಮುಚ್ವಿ ಹೋಗಿದೆ.

ಮುಂಡಾಜೆ ಗ್ರಾಮದ ಪಿಲತ್ತಡ್ಕ ಎಂಬಲ್ಲಿ ವನದುರ್ಗಾ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಶ್ರೀಧರ ಪೂಜಾರಿ ಎಂಬವರ ಮನೆಯ ಸಮೀಪ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿದಿದೆ. ರಸ್ತೆಗೆ ಹಾಗೂ ಮನೆಯ ಹಿಂಭಾಗದಲ್ಲಿ ಮಣ್ಣು ಬಿದ್ದಿದೆ.

ರಸ್ತೆ ಸಂಪೂರ್ಣ ಮುಚ್ಚಿ ಹೋಗಿದ್ದು ಜನರ ಹಾಗೂ ವಾಹನಗಳ ಸಂಚಾರ ಅಸಾಧ್ಯವಾಗಿದೆ. ಮನೆಯ ಹಿಂಭಾಗದಲ್ಲಿಯೂ ಮಣ್ಣು ಬಿದ್ದಿದ್ದು ಅಪಾಯಕಾರಿ ಸ್ಥಿತಿಯಿದೆ. ಇದೀಗ ಸ್ಥಳೀಯ ಯುವಕರು ರಸ್ತೆಗೆ ಬಿದ್ದಿರುವ ಮಣ್ಣನ್ನು ತೆರವು ಗೊಳಿಸುವ ಕಾರ್ಯವನ್ನು ಆರಂಭಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News