×
Ad

ಬೆಳ್ತಂಗಡಿ: ಅಕ್ರಮ ಜಾನುವಾರು ಸಾಗಾಟ; ಚಾಲಕ ಪದ್ಮೇಶ್ ಬಂಧನ

Update: 2023-08-14 11:41 IST

ಬೆಳ್ತಂಗಡಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನ ಸಹಿತ ಜಾನುವಾರುಗಳನ್ನು ಧರ್ಮಸ್ಥಳ ಠಾಣಾ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ರವಿವಾರ ಚಾರ್ಮಾಡಿ ಪೊಲೀಸ್ ಚೆಕ್ ಪೋಸ್ಟ್ ಬಳಿ ನಡೆದಿದೆ.

ಚಾಲಕನ ಸಹಿತ ವಾಹನ ಹಾಗೂ ಮೂರು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಚೆಕ್ ಪೋಸ್ಟ್ ಬಳಿ ಅತಿವೇಗದಲ್ಲಿ ಬಂದ ವಾಹನವನ್ನು ತಡೆದ ಪೊಲೀಸರು ಯಾವುದೇ ಪರವಾನಿಗೆ ಇಲ್ಲದೇ ಸಾಗಾಟ ಮಾಡುತ್ತಿದ್ದ ಮೂರು ಜಾನುವಾರುಗಳನ್ನು ರಕ್ಷಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಮೂಡಿಗೆರೆ ಕೂಡಹಳ್ಳಿ ಗ್ರಾಮದ ಕೆ ಕೆ ಪದ್ಮೇಶ್ (41) ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಆರೋಪಿ ಸಾಲೆತ್ತೂರು ನಿವಾಸಿ ಹಮೀದ್ ಎಂಬಾತ ಪರಾರಿಯಾಗಿದ್ದಾನೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ -2020 ಮತ್ತು ಕಲಂ:66 ಜೊತೆಗೆ 192(ಎ) ಐ ಎಂ ವಿ ಯಂತೆ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News