ಬೆಳ್ತಂಗಡಿ: ತೆಕ್ಕಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮಯ್ಯ ವರ್ಗಾವಣೆ
Update: 2025-09-13 23:51 IST
ಸುಮಯ್ಯ ಜಿ.ಎಚ್.
ಬೆಳ್ತಂಗಡಿ: ತೆಕ್ಕಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿದ್ದ ಸುಮಯ್ಯ ಜಿ.ಎಚ್. ಅವರನ್ನು ಬೆಳ್ತಂಗಡಿ ತಾಲ್ಲೂಕಿನ ತಣ್ಣೀರುಪಂತ ಗ್ರಾಮ ಪಂಚಾಯತ್‌ಗೆ ವರ್ಗಾಯಿಸಿ ಆದೇಶಿಸಲಾಗಿದೆ.
ಸುಮಯ್ಯ ಜಿ.ಎಚ್. ಅವರನ್ನು ಸಂಬಂಧಪಟ್ಟ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕೂಡಲೇ ಕರ್ತವ್ಯದಿಂದ ಬಿಡುಗಡೆ ಮಾಡಿ ವರ್ಗಾಯಿಸಿದ ಗ್ರಾಮ ಪಂಚಾಯತಿಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಕರ್ತವ್ಯದಿಂದ ಬಿಡುಗಡೆ ಮಾಡಿದ ಬಗ್ಗೆ ಹಾಗೂ ವರ್ಗಾವಣೆಗೊಂಡ ಗ್ರಾಮ ಪಂಚಾಯತಿಯಲ್ಲಿ ಕರ್ತವ್ಯಕ್ಕೆ ಹಾಜರಾದ ಬಗ್ಗೆ ಸಂಬಂಧಪಟ್ಟ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವರದಿ ನೀಡಲು ಸೂಚಿಸಲಾಗಿದೆ ಎಂದು ಪಂಚಾಯತ್ ರಾಜ್ ಆಯುಕ್ತಾಲಯದ ಪ್ರಕಟನೆ ತಿಳಿಸಿದೆ.