×
Ad

ಬೆಳ್ತಂಗಡಿ: ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ; ಪತಿ ಪೊಲೀಸ್ ವಶಕ್ಕೆ

Update: 2023-11-03 17:13 IST

ಬೆಳ್ತಂಗಡಿ: ಬೆಳಾಲು ಗ್ರಾಮದ ಮಾಚಾರುವಿನಲ್ಲಿ ಮಹಿಳೆಯೊಬ್ಬರ ಮೃತದೇಹ ಸಮೀಪದ ಬಾವಿಯಲ್ಲಿ ಪತ್ತೆಯಾಗಿದ್ದು ಇದೊಂದು ಕೊಲೆ ಪ್ರಕರಣ ಎಂಬ ಅನುಮಾನ ವ್ಯಕ್ತವಾಗಿದ್ದು, ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಾಲು ಮಾಚಾರು ಸಮೀಪದ ಕೆಂಪನೊಟ್ಟು ಎಂಬಲ್ಲಿನ ತೋಟವೊಂದರಲ್ಲಿ ಈ ಘಟನೆ ಸಂಭವಿಸಿದ್ದು, ಶಶಿಕಲಾ (27) ಮೃತ ಮಹಿಳೆ.

ಶಶಿಕಲಾ ಹಾಗೂ ಅವರ ಪತಿ ಸುಧಾಕರ ನಾಯ್ಕ ಇಲ್ಲಿ ತೋಟವೊಂದರಲ್ಲಿ ಕೆಲಸಕ್ಕಿದ್ದರು. ಇವರಿಗೆ ಒಬ್ಬಳು ಮಗಳಿದ್ದು ಮಗಳು ತಾಯಿ ಮನೆಗೆ ಹೋಗಿದ್ದಳು ಎನ್ನಲಾಗಿದೆ. ಗುರುವಾರ ರಾತ್ರಿ ಪತಿ ಪತ್ನಿ ಮಾತ್ರ ಮನೆಯಲ್ಲಿದ್ದರು.

ಇಂದು ಬೆಳಗ್ಗೆ ಪತಿ ಸುಧಾಕರ ರಬ್ಬರ್ ಟ್ಯಾಪಿಂಗ್ ಮಾಡಲು ಹೋಗಿದ್ದ ಎನ್ನಲಾಗಿದ್ದು, ಬಂದು ನೋಡಿದಾಗ ಶಶಿಕಲಾ ಅವರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ ಎಂದು ಆತ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಹಾಗೂ ಇತರ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು ಮೃತದೇಹವನ್ನು ಬಾವಿ ಯಿಂದ ಮೇಲಕ್ಕೆತ್ತಲಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆಯ ಬಳಿಕವಷ್ಟೆ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಬೇಕಾಗಿದೆ. ಇದೊಂದು ಕೊಲೆ ಪ್ರಕರಣ ಎಂಬ ಅನುಮಾನ ವ್ಯಕ್ತವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸುಧಾಕರ ನಾಯ್ಕನನ್ನು ಧರ್ಮಸ್ಥಳ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.








 


 


 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News