×
Ad

ಬೆಳ್ತಂಗಡಿ | ಪುನೀತ್ ಕೆರೆಹಳ್ಳಿಯನ್ನು ತಡೆದು ನಿಂದಿಸಿದ ಆರೋಪ: ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು

Update: 2025-04-20 09:48 IST

ಬೆಳ್ತಂಗಡಿ: ಉಜಿರೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ತಡೆದ ಘಟನೆಗೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಉಜಿರೆ ನಿವಾಸಿಗಳಾದ ಅನಿಲ್ ಅಂತರ, ಮನೋಜ್ ಕುಂಜರ್ಪ, ಪ್ರಜ್ವಲ್ ಗೌಡ, ಪ್ರಭಾಕರ, ಗಣೇಶ್ ಹಾಗೂ ಇತರರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಎಸ್ಸೈ ಮುರಳೀಧರ ನಾಯ್ಕ್ ಕೆ.ಜಿ. ಅವರ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.

ಪುನೀತ್ ಕೇರೆಹಳ್ಳಿ ಉಜಿರೆಗೆ ಬಂದರೆ ಉಜಿರೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿ ಶಾಂತಿ ಭಂಗ ಉಂಟು ಮಾಡುವ ಸಾಧ್ಯತೆ ಇದ್ದ ಕಾರಣ ಸಾರ್ವಜನಿಕ ಹಿತದೃಷ್ಟಿಯಿಂದ ಆತ ದ.ಕ. ಜಿಲ್ಲೆಯ ಸರಹದ್ದಿನೊಳಗೆ ಪ್ರವೇಶಿಸದಂತೆ ಕಲಂ163 ಬಿ.ಎನ್.ಎಸ್ 2023 ರಂತೆ ನಿರ್ಬಂಧ ವಿಧಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದರೆ ಆದೇಶವನ್ನು ಉಲ್ಲಂಘಿಸಿ ಶನಿವಾರ ಸಂಜೆಯ ವೇಳೆ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಬಳಿ ಸಾರ್ವಜನಿಕ ರಸ್ತೆಗೆ ಪುನೀತ್ ಆಗಮಿಸಿದ್ದರು. ಈ ವೇಳೆ ಮಹೇಶ್ ಶೆಟ್ಟಿ ತಿಮರೋಡಿಯ ಬೆಂಬಲಿಗರಾದ ಅನಿಲ್ ಅಂತರ, ಮನೋಜ್ ಕುಂಜರ್ಪ, ಪ್ರಜ್ವಲ್ ಗೌಡ ಹಾಗೂ ಇತರರು ಗುಂಪು ಸೇರಿಕೊಂಡು ಉಜಿರೆ ಎಸ್.ಡಿ.ಎಂ. ಕಾಲೇಜಿನ ಎದುರಿನ ರಸ್ತೆಯಲ್ಲಿ ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿದ್ದಾರೆ. ಅಲ್ಲದೇ, ಶಾಂತಿ ಭಂಗ ತರುವ ಉದ್ದೇಶದಿಂದ ಪುನೀತ್ ಕೇರೆಹಳ್ಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಸುಗಮ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News