×
Ad

ಬೆಳ್ತಂಗಡಿ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೆಳಾಲು ಗ್ರಾಮದ ನದಿಯಲ್ಲಿ ಪತ್ತೆ

Update: 2025-12-30 13:39 IST

ಬೆಳ್ತಂಗಡಿ: ನಾಪತ್ತೆಯಾಗಿದ್ದ ಬೆಳಾಲು ಪುರುಷರಬೆಟ್ಟು ನಿವಾಸಿ ರಾಜೇಶ್ ಪಿ. (30) ರವರ ಮೃತದೇಹ ಬೆಳಾಲು ಗ್ರಾಮದ ಬಲಿಪೆ ನೇತ್ರಾವತಿ ನದಿಯಲ್ಲಿ ಡಿ.30 ರಂದು ಪತ್ತೆಯಾಗಿದೆ. 

ಡಿ. 27ರಂದು ಬೆಳಿಗ್ಗೆ ಮನೆಯಿಂದ ಹೊರಟ ರಾಜೇಶ್ ಪಿ, ವಾಪಾಸು ಹಿಂದಿರುಗದೆ ನಾಪತ್ತೆಯಾಗಿದ್ದರು.ಅವರ ಪತ್ತೆಗಾಗಿ ಮನೆಯವರು ಹಾಗೂ ಸ್ಥಳೀಯವರು ಹುಡುಕಾಟ ನಡೆಸಿದ್ದರೂ ಪತ್ತೆಯಾಗಿರಲಿಲ್ಲ.

ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿ ನಂತರ ತೀವ್ರ ಹುಡುಕಾಟ ನಡೆಸಿದಾಗ ಇಂದು ಬೆಳಿಗ್ಗೆ ಬಲಿಪೆಯ ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News