ಬೆಳ್ತಂಗಡಿ | ಧರ್ಮಸ್ಥಳ ದೇವಾಲಯಕ್ಕೆ ಡಿಸಿಎಂ ಡಿಕೆಶಿ ಭೇಟಿ
Update: 2025-04-20 11:51 IST
ಬೆಳ್ತಂಗಡಿ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದರು.
ಮಂಜುನಾಥಸ್ವಾಮಿಯ ದರ್ಶನ ಪಡೆದ ಡಿಸಿಎಂ ಪ್ರಾರ್ಥಿಸಿ, ಹುಂಡಿಗೆ ಕಾಣಿಕೆ ಹಾಕಿದರು. ಬಳಿಕ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಅರ್ಶಿವಾದ ಪಡೆದು ಬೆಳ್ತಂಗಡಿ ಕಾರ್ಯಕ್ರಮಕ್ಕೆ ಪ್ರಯಾಣ ಬೆಳೆಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಸೇರಿದಂತೆ ಇನ್ನಿತರರು ಜೊತೆಗಿದ್ದರು.