ಬೆಳ್ತಂಗಡಿ: ವರದಕ್ಷಿಣೆ ಕಿರುಕುಳ, ಪತ್ನಿಯ ಕೊಲೆಗೆ ಯತ್ನ ಪ್ರಕರಣ; ಆರೋಪಿ ಸೆರೆ
ಬೆಳ್ತಂಗಡಿ : ಎರಡು ತಿಂಗಳ ಹಿಂದೆ ಮದುವೆಯಾದ ದಂಪತಿ ಹನಿಮೂನ್ ಗೆ ಬಂದು ಉಜಿರೆಯ ಹೊಟೇಲ್ ನಲ್ಲಿ ಉಳಿದುಕೊಂಡು ರಾತ್ರಿ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿಯನ್ನು ಬಂಧಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಂಗಳೂರು ರಾಮನಗರ ಜಿಲ್ಲೆಯ ಬಿಡದಿ ತಾಲೂಕಿನ ನಂದಗೋಕುಲ ನಿವಾಸಿಯಾಗಿರುವ ವಿಶ್ವನಾಥ (24) ಮತ್ತು 22 ವರ್ಷದ ಯುವತಿ 2025ರ ಮೇ 22ರಂದು ಮದುವೆಯಾಗಿದ್ದು, ಜುಲೈ 22 ರಂದು ರಾತ್ರಿ ಉಜಿರೆಯ ಹೊಟೇಲಿಗೆ ಬಂದು ರೂಂ ಪಡೆದು ತಂಗಿದ್ದರು. ಹೊಟೇಲ್ ರೂಂ ನಲ್ಲಿ ಜುಲೈ 22 ರಂದು ರಾತ್ರಿ ಕುಡಿದ ಮತ್ತಿನಲ್ಲಿ ಪತ್ನಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡಿ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಿ ಪತ್ನಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಜುಲೈ 23 ರಂದು ಸಂಜೆ ಪತಿ ವಿಶ್ವನಾಥ ಎಂಬಾತನ ವಿರುದ್ಧ ದೂರು ನೀಡಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪತಿ ವಿಶ್ವನಾಥ ವಿರುದ್ಧ BNS 109,115(1), 85 ,4DP (ಕೊಲೆಯತ್ನ, ಹಲ್ಲೆ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಬೇಡಿಕೆ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಪತಿ ವಿಶ್ವನಾಥ್ ನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.