×
Ad

ಬೆಳ್ತಂಗಡಿ: ಪಾನಮತ್ತ ವ್ಯಕ್ತಿಯಿಂದ ಪತ್ನಿ, ಮಗಳ ಮೇಲೆ ಮಾರಣಾಂತಿಕ ಹಲ್ಲೆ

Update: 2023-12-19 15:16 IST

Photo: freepik

ಬೆಳ್ತಂಗಡಿ:  ವ್ಯಕ್ತಿಯೊಬ್ಬ ಮದ್ಯಪಾನ ಮಾಡಿ ಬಂದು ಪತ್ನಿ ಹಾಗೂ ಮಗಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಶಿಶಿಲ ಗ್ರಾಮದ ಕೋಟೆಬಾಗಿಲು ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಹಲ್ಲೆ ನಡೆಸಿದ ಆರೋಪಿಯನ್ನು ಸುರೇಶ್ ಎಂದು ಗುರುತಿಸಲಾಗಿದೆ. ಪಾನಮತ್ತನಾಗಿ ಬಂದು ಹಲ್ಲೆ ನಡೆಸಿದ ಪರಿಣಾಮ  ಪತ್ನಿಯ ಮುಖ ಮತ್ತು ಒಂದು ಕಣ್ಣಿಗೆ ಗಂಭೀರ ಗಾಯಗಳಾಗಿದ್ದು, ಮಗಳ ತಲೆಗೂ ಈತ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ತೀವ್ರವಾಗಿ ಹಲ್ಲೆಗೆ ಒಳಗಾದ ತಾಯಿ ಹಾಗೂ ಮಗಳು ಮನೆಯಿಂದ ಹೊರಗೆ ಬಂದಿದ್ದು, ಹಲ್ಲೆಗೊಳಗಾದ ಮಗಳು ನೆರೆಮನೆಗೆ ಬಂದು ವಿಷಯ ತಿಳಿಸಿದಾಗಲೇ ಇತರರಿಗೆ ಮಾಹಿತಿ ಲಭಿಸಿದೆ. 

ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ರಾತ್ರಿ ಹುಡುಕಾಟ ನಡೆಸಿದರೂ ಗಾಯಗೊಂಡಿದ್ದ ಪತ್ನಿ ನಾಪತ್ತೆಯಾಗಿದ್ದು, ಮಂಗಳವಾರ ಬೆಳಿಗ್ಗೆ ಹುಡುಕಾಟ ನಡೆಸಿದಾಗ ಸ್ಥಳೀಯ ಮನೆಯೊಂದರೆ ಕೊಟ್ಟಿಗೆಯಲ್ಲಿ ಅಸ್ವಸ್ಥರಾಗಿ ಬಿದ್ದಿರುವುದು ಕಂಡುಬಂದಿದೆ.

ಸ್ಥಳೀಯರ ಸಹಕಾರದೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News