×
Ad

ಬೆಳ್ತಂಗಡಿ | ಗೇರುಕಟ್ಟೆ ಮನೆ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಕಾಡುಪ್ರಾಣಿ ಮಾಂಸ ಸಹಿತ ಪರಿಕರಗಳು ವಶಕ್ಕೆ

Update: 2025-07-15 10:58 IST

ಬೆಳ್ತಂಗಡಿ: ಅಕ್ರಮವಾಗಿ ಕಾಡು ಪ್ರಾಣಿ ಬೇಟೆಯಾಡಿ ತಂದು ಮನೆಯ ಶೆಡ್ ನಲ್ಲಿ ಮಾಂಸ ಮಾಡಿ ಸಾಗಾಟಕ್ಕೆ ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮಾಡಿ ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳನ್ನು ವಶಪಡಿಸಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ನಡೆದಿದೆ.

ಗೇರುಕಟ್ಟೆ ನಿವಾಸಿ ಜೋಸ್ಸಿ ಅಲ್ವಿನ್ ಲೋಬೋ ಎಂಬವರ ಮನೆ ಮೇಲೆ ಜು.12ರಂದು ಅರಣ್ಯಾಧಿಕಾರಿಗಳು ನಡೆಸಿದ್ದಾರೆ. ಈ ವೇಳೆ ಬೇಟೆಯಾಡಿ ಕಾಡು ಪ್ರಾಣಿ ಸಾಗಾಟಕ್ಕೆ ಬಳಸಿದ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಕುಲಾಯಿ ಮೇಗಿನ ಮನೆ ನಿವಾಸಿ ಶರತ್ ಶೆಟ್ಟಿ ಎಂಬವರಿಗೆ ಸೇರಿದ ಒಂದು ಕಾರು ಅಲ್ಲದೇ, 17 ಕೆ.ಜಿ ಕಾಡು ಪ್ರಾಣಿ ಮಾಂಸ, ಒಂದು ಕೋವಿ, ಒಂದು ಕತ್ತಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ವಶಪಡಿಸಿಕೊಂಡ ಕಾಡುಪ್ರಾಣಿ ಮಾಂಸವನ್ನು ಖಚಿತ ಪಡಿಸಿ ವರದಿಗಾಗಿ ಪ್ರಯೋಗಾಲಯಕ್ಕೆ ಅರಣ್ಯಾಧಿಕಾರಿಗಳು ಕಳುಹಿಸಿದ್ದಾರೆ.

ಈ ಬಗ್ಗೆ ಆರೋಪಿಗಳಾದ ಜೋಸ್ಸಿ ಅಲ್ವಿನ್ ಲೋಬೋ ಮತ್ತು ಶರತ್ ಶೆಟ್ಟಿ ವಿರುದ್ಧ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯಲ್ಲಿ ಜುಲೈ 13 ರಂದು ವನ್ಯಜೀವಿ ಅಪರಾಧ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್.ಟಿ.ಎನ್., ಡಿ.ಆರ್.ಎಫ್.ಒ. ಸಂದೀಪ್, ರಾಘವೇಂದ್ರ, ಕಿರಣ್ ಪಾಟೀಲ್, ಕಮಲ, ಬೀಟ್ ಫಾರೆಸ್ಟರ್ ಪರಶುರಾಮ್ ಮೇಟಿ, ಚಾಲಕ ದಿವಾಕರ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News