×
Ad

BELTHANGADY: ಮನೆಯಂಗಳದಲ್ಲಿ ನಿಂತಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ

ಅಡಿಕೆ ಮರವೇರಿ ಜೀವ ಉಳಿಸಿಕೊಂಡ ಮಂಜಪ್ಪ

Update: 2026-01-16 11:05 IST

ಬೆಳ್ತಂಗಡಿ, ಜ.16: ಮನೆಯಂಗಳದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಕನ್ಯಾಡಿ 1 ಗ್ರಾಮದ ಅಂಡೀರುಮಾರು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.

ಅಂಡೀರುಮಾರು ನಿವಾಸಿ ಮಂಜಪ್ಪ ನಾಯ್ಕ(62) ಚಿರತೆ ದಾಳಿಯಿಂದ ಗಾಯಗೊಂಡವರು.

ಮಂಜಪ್ಪ ನಾಯ್ಕ ಇಂದು ಬೆಳಗ್ಗೆ 8:15ರ ಸುಮಾರಿಗೆ ಮನೆಯ ಅಂಗಳದಲ್ಲಿದ್ದ ವೇಳೆ ಏಕಾಏಕಿ ನುಗ್ಗಿದ ಚಿರತೆಯೊಂದು ಅವರ ಮೇಲೆ ದಾಳಿ ನಡೆಸಿದೆ. ತಕ್ಷಣ ಹತ್ತಿರದ ಅಡಿಕೆ ಮರವನ್ನೇರಿ ಅವರು ಜೀವ ಉಳಿಸಿಕೊಂಡಿದ್ದಾರೆ.

ಈ ವೇಳೆ ಮಂಜಪ್ಪ ನಾಯ್ಕ ಅವರ ಕಾಲಿಗೆ ಗಂಭೀರ ಗಾಯಗಳಾಗಿವೆ. ಅವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News