×
Ad

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷ ಗಡಿಪಾರು

Update: 2025-09-23 16:38 IST

ಮಹೇಶ್ ಶೆಟ್ಟಿ ತಿಮರೋಡಿ

ಬೆಳ್ತಂಗಡಿ : ಸೌಜನ್ಯ ಪರ ಹೋರಾಟಗಾರ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಮಾರು 32 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು, ಈ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸರು ಸಲ್ಲಿಸಿದ ಕೋರಿಕೆ ಯನ್ನು ಮನ್ನಿಸಿ ಪುತ್ತೂರು ಎಸಿ ಅವರು ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

ಪುತ್ತೂರು ಸಹಾಯಕ ಆಯುಕ್ತ (ಎಸಿ) ಸ್ಟೆಲ್ಲಾ ವರ್ಗಿಸ್ ಅವರಿಗೆ ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ ನೀಡಿದ್ದನ್ನು ಪರಿಶೀಲನೆ ನಡೆಸಿ ವರದಿಯ ಆಧಾರದಲ್ಲಿ ಸೆ.18ರಂದು ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷಗಳ ಅವಧಿಗೆ ಗಡಿಪಾರು ಮಾಡಿ ಆದೇಶ ಮಾಡಿರುವುದಾಗಿ ತಿಳಿದು ಬಂದಿದೆ.

ಗಡಿಪಾರು ಮಾಡಿದ ಆದೇಶದ ಪ್ರತಿ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿಗೆ ಬಂದ ಬಳಿಕ ಗಡಿಪಾರು ಮಾಡುವ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News