×
Ad

ಬೆಳ್ತಂಗಡಿ: ವಿಷವಿಕ್ಕಿ 10ಕ್ಕೂ ಅಧಿಕ ನಾಯಿಗಳ ಹತ್ಯೆ

Update: 2024-03-31 10:19 IST

ಬೆಳ್ತಂಗಡಿ, ಮಾ.31: ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ರಸ್ತೆಯಲ್ಲಿ ಯಾರೋ ವಿಷವಿಕ್ಕಿದ ಪರಿಣಾಮ ಸಾಕುನಾಯಿಗಳು ಸೇರಿದಂತೆ 10ಕ್ಕಿಂತ ಅಧಿಕ ನಾಯಿಗಳು ಸಾವನ್ನಪ್ಪಿವೆ.

ಶನಿವಾರ ರಾತ್ರಿ ಈ ರಸ್ತೆಯುದ್ದಕ್ಕೂ ಯಾರೋ ಯಾವುದು ಆಹಾರದಲ್ಲಿ ವಿಷವನ್ನು ಬೆರೆಸಿ ಅಲ್ಲಲ್ಲಿ ಎಸೆದು ಹೋಗಿದ್ದಾರೆ. ಅವುಗಳನ್ನು ತಿಂದಿರುವ ನಾಯಿಗಳು ಅಲ್ಲಲ್ಲಿ ಸತ್ತು ಬಿದ್ದಿವೆ.

ತಡರಾತ್ರಿ ಈಸ್ಟರ್ ಹಬ್ಬದಿಂದ ತೆರಳುತ್ತಿದ್ದ ಜನರು ಇದನ್ನು ಗಮನಿಸಿ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ ಅವರ ಗಮನಕ್ಕೆ ತಂದಿದ್ದಾರೆ. ಪರಿಶೀಲನೆ ನಡೆಸಿದಾಗ ಕೆಲವು ಮನೆಗಳ ಅಂಗಳದಲ್ಲೂ ನಾಯಿಗಳು ಸತ್ತು ಬಿದ್ದಿರುವುದು ಕಂಡು ಬಂದಿದೆ.

ಸಾವನ್ನಪ್ಪಿದ ನಾಯಿಗಳನ್ನು ಪಂಚಾಯತ್ ವತಿಯಿಂದ ಹೂಳುವ ವ್ಯವಸ್ಥೆ ಮಾಡಲಾಯಿತು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News