×
Ad

ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಾಂತಿ

Update: 2025-09-05 12:39 IST

ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥರಾದ ಡಾ.ಪ್ರಣವ್ ಮೊಹಾಂತಿ ಸೆ.5ರಂದು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಎಸ್.ಐ.ಟಿ ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಸಾಕ್ಷಿ ದೂರುದಾರ ಚಿನ್ನಯ್ಯ ತಂದಿರುವ ಬುರುಡೆ ವಿಚಾರಕ್ಕೆ ಸಂಬಂಧಿಸಿದ ತನಿಖೆಯಲ್ಲಿ ಇಂದು ಅತ್ಯಂತ ಮಹತ್ವದ ಬೆಳವಣಿಗೆಗಳು ನಡೆಯುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಎಸ್ಐಟಿ ಕಚೇರಿಯಲ್ಲಿ ಗಿರೀಶ್ ಮಟ್ಟಣ್ಣನವರ್

ಬೆಳ್ತಂಗಡಿ ಎಸ್ಐಟಿ ಕಚೇರಿಗೆ ವಿಚಾರಣೆಗಾಗಿ ಸೌಜನ್ಯಾಪರ ಹೋರಾಗಾರ ಗಿರೀಶ್ ಮಟ್ಟಣ್ಣನವರ್ ಶುಕ್ರವಾರ ಬೆಳಗ್ಗೆ ಆಗಮಿಸಿದ್ದಾರೆ. ಯೂಟ್ಯೂಬರ್ ಅಭಿಷೇಕ್ ಕಳೆದ ಮೂರು ದಿನಗಳಿಂದ ಎಸ್ಐಟಿ ವಿಚಾರಣೆ ಎದುರಿಸುತ್ತಿದ್ದಾರೆ.

ಅದೇರೀತಿ ಜಯಂತ್ ಟಿ. ಗುರುವಾರ ಸಂಜೆ ವಿಚಾರಣೆಗಾಗಿ ಬಂದವರು ಇನ್ನೂ ಎಸ್ಐಟಿ ಠಾಣೆಯಲ್ಲೇ ಇದ್ದಾರೆ.

ಇಂದು ಎಸ್.ಐ.ಟಿ ಕಚೇರಿಗೆ ಆಗಮಿಸಿರುವ ಪ್ರಣವ್ ಮೊಹಾಂತಿ ಈ ಮೂವರ ವಿಚಾರಣೆಯನ್ನು ಮತ್ತೆ ನಡೆಸಲಿದ್ದಾರೆ. ಚಿನ್ನಯ್ಯ ತಂದಿರುವ ಬುರುಡೆಯ ಬಗ್ಗೆ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿರುವುದಾಗಿ ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News