×
Ad

ಬೆಳ್ತಂಗಡಿ| ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಒಂದು ಅಸ್ಥಿಪಂಜರದ ಗುರುತು ಪತ್ತೆ ಹಚ್ಚಿದ ಎಸ್.ಐ.ಟಿ

Update: 2025-09-18 17:46 IST

ಯು.ಬಿ.ಅಯ್ಯಪ್ಪ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಏಳು ಅಸ್ಥಿಪಂಜರ ಪತ್ತೆಯಾದ ಪ್ರಕರಣದಲ್ಲಿ ಒಂದು ಅಸ್ಥಿಪಂಜರದ ಗುರುತನ್ನು ಐಡಿ ಕಾರ್ಡ್ ಮೂಲಕ ಎಸ್.ಐ.ಟಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.

ಕೊಡುಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಶೆಟ್ಟಿಗೇರಿ ಗ್ರಾಮದ ಯು.ಬಿ.ಅಯ್ಯಪ್ಪ (70) ಎಂಬವರ ಅಸ್ಥಿಪಂಜರ ಎಂದು ಎಸ್.ಐ.ಟಿ ತಿಳಿಸಿದ್ದು, ಅಸ್ಥಿಪಂಜರದ ಜೊತೆ ಇದ್ದ ಐಡಿ ಕಾರ್ಡ್ ಪತ್ತೆ ಹಚ್ಚಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಐಡಿ ಕಾರ್ಡ್ ಸಮೀಪ ಪತ್ತೆಯಾದ ಮೃತದೇಹ ಅವರದ್ದೇ ಆಗಿರಬಹುದು ಎಂದು ಎಸ್.ಐ.ಟಿ ತಂಡ ಅನುಮಾನಿ ಸಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾರಂಭಿಸಿದೆ.

ಮೈಸೂರು ಆಸ್ಪತ್ರೆಗೆ ಚಿಕಿತ್ಸೆಗೆ ಹೋದ ಅಯ್ಯಪ್ಪ ನಾಪತ್ತೆಯಾದ ಬಗ್ಗೆ ಕಟ್ಟು ಪೊಲೀಸ್ ಠಾಣೆಯಲ್ಲಿ ಕುಟುಂಬ ಸದಸ್ಯರು ಪ್ರಕರಣ ದಾಖಲಿಸಿದ್ದರು ಆದರೆ ಅವರ ಬಗ್ಗೆ ಯಾವುದೇ ಸುಳಿವುಗಳು ಲಭಿಸಿರಲಿಲ್ಲ.

ಇದೀಗ ಬರೆ ತಲೆ ಬುರುಡೆ ಹಾಗು ಎಲುಬುಗಳು ಮಾತ್ರ ಪತ್ತೆಯಾಗಿದ್ದು ಈ ಹಿನ್ನಲೆಯಲ್ಲಿ ಇದು ಅವರದ್ದೇ ಮೃತದೇಹವೇ ಎಂದು ವಿಧಿವಿಜ್ಞಾನ ಪ್ರಯೋಗಾಲಯದಿಂದಲೇ ಪತ್ತೆಯಾಗಬೇಕಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News