×
Ad

ಬೆಂಗ್ರೆ ಶಾಲೆಯನ್ನು ದತ್ತು ಸ್ವೀಕರಿಸಿದ ಭಂಡಾರಿ ಫೌಂಡೇಶನ್

Update: 2024-08-20 19:56 IST

ಮಂಗಳೂರು: ಶಾಲೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಭಂಡಾರಿ ಫೌಂಡೇಶನ್ ಬೆಂಗ್ರೆಕಸಬ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ಮಂಗಳವಾರ ದತ್ತು ಸ್ವೀಕರಿಸಿದೆ.

‘‘ ರಾಜ್ಯದ ಇತಿಹಾಸದಲ್ಲೇ ಇದೊಂದು ಪೂರ್ಣ ಪ್ರಮಾಣದ ದತ್ತು ಸ್ವೀಕಾರ ಆಗಿರುತ್ತದೆ. ಈ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಉತ್ತಮ ವಾತಾವರಣ ನಿರ್ಮಿಸುವುದರ ಜೊತೆಗೆ ಹೊಸ ಕಟ್ಟಡ, ವಿದ್ಯುತ್, ಸ್ವಚ್ಛ ನೀರು, ಕ್ರೀಡಾ ಸೌಲಭ್ಯ ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸುತ್ತೇವೆ’’ ಎಂದು ಭಂಡಾರಿ ಫೌಂಡೇಶನ್ ಸ್ಥಾಪಕರು ಮತ್ತು ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

‘ಬೆಂಗ್ರೆ ಕಸಬ ಸರಕಾರಿ ಶಾಲೆಗೆ 60ಕ್ಕೂ ಅಧಿಕ ವರ್ಷಗಳ ಇತಿಹಾಸ ಹೊಂದಿದ್ದು, ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಶಾಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 800ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ. ನಮ್ಮ ಬಹುಕಾಲದ ಬೇಡಿಕೆಯನ್ನು ಶಾಸಕ ಮಂಜುನಾಥ ಭಂಡಾರಿ ಈಡೇರಿಸಿದ್ದು, ಇಲ್ಲಿನ ಜನತೆ ಅವರಿಗೆ ಅಭಾರಿಯಾಗಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ, ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕಾಧ್ಯಕ್ಷ ಲಾರೆನ್ಸ್ ಡಿ’ಸೋಜ, ಅಶ್ರಫ್ ಬೆಂಗ್ರೆ, ಶಾಲಾ ಮುಖ್ಯಶಿಕ್ಷಕಿಯರಾದ ಶೋಭಾ.ಬಿ, ಸಂತೋಷ್ ಕುಮಾರಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News