×
Ad

ಬೆಂಜನಪದವು : ಡಿ.3ರಂದು ಅಕ್ಷಯ ಪಾತ್ರ ಫೌಂಡೇಶನ್ ಅಡುಗೆ ಮನೆ ಉದ್ಘಾಟನೆ

Update: 2023-12-02 15:41 IST

ಬಂಟ್ವಾಳ, ಡಿ.2: ಅಕ್ಷಯ ಪಾತ್ರ ಫೌಂಡೇಶನ್, ಇದರ ಅಡುಗೆ ಮನೆಯ ಉದ್ಘಾಟನಾ ಸಮಾರಂಭವು ಡಿ.3ರಂದು ಬಂಟ್ವಾಳ ತಾಲೂಕಿನ ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜು ಸಮೀಪ ನಡೆಯಲಿದೆ ಎಂದು ಫೌಂಡೇಶನ್ ಅಧ್ಯಕ್ಷ ಗುಣಕರ ರಾಮದಾಸ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ದಾನಿಗಳಾದ ಜಿ.ಟಿ. ಫೌಂಡೇಶನ್ ಮತ್ತು ದಿಯಾ ಸಿಸ್ಟಮ್ಸ್ ಮಂಗಳೂರು ಪ್ರೈ.ಲಿ. ಲಿಮಿಟೆಡ್ನ ವಿಜಯ್ ಮತ್ತು ಶಾಮ ಕೇಡಿಯಾ, ದಿವಂಗತ ಡಾ. ವಿ ರವಿಚಂದ್ರನ್ ಅವರ ನಿರಂತರ ಬೆಂಬಲ ಮತ್ತು ದೂರದೃಷ್ಟಿ ಕೊಡುಗೆಯೇ ಈ ಅಡುಗೆ ಮನೆ ನಿರ್ಮಿಸಲಾಗಿದೆ ಎಂದು ಅವರು ಹೇಳಿದರು.

ಉಡುಪಿಯ ಪುತ್ತಿಗೆ ಮಠದ ಶ್ರೀ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್ ಕಟೀಲು, ಬೆಂಗಳೂರಿನ ಸೆಂಚುರಿ ರಿಯಲ್ ಎಸ್ಟೇಟ್ ಗ್ರೂಪ್ನ ಅಧ್ಯಕ್ಷ ಡಾ. ಪಿ ದಯಾನಂದ ಪೈ., ದ.ಕ. ಜಿಲ್ಲಾಧಿಕಾರಿ ಎಂ.ಪಿ.ಮುಲ್ಲೈ ಮುಗಿಲನ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಡಾ.ಆನಂದ ಕೆ, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಅಕ್ಷಯ ಪಾತ್ರ ಪ್ರತಿಷ್ಠಾನದ ಅಧ್ಯಕ್ಷ ಮಧು ಪಂಡಿತ್ ದಾಸ ಮತ್ತು ಅಕ್ಷಯ ಪಾತ್ರ ಫೌಂಡೇಶನ್ನ ಉಪಾಧ್ಯಕ್ಷ ಚಂಚಲಪತಿ ದಾಸ ಅವರು ಉಪಸ್ಥಿತರಿರುವರು ಎಂದು ತಿಳಿಸಿದರು.

124 ಸರಕಾರಿ ಮತ್ತು 41 ಸರಕಾರಿ ಅನುದಾನಿತ ಸಂಸ್ಥೆಗಳು ಸೇರಿದಂತೆ 165 ಕ್ಕೂ ಹೆಚ್ಚು ಶಾಲೆಗಗಳಿಗೆ ಅಗತ್ಯ ಪೌಷ್ಟಿಕಯುತವಾದ 25,000 ಊಟವನ್ನು ಉತ್ಪಾದಿಸುವ ಸಾಮರ್ಥ್ಯದೊಂದಿಗೆ ಈ ಅಡುಗೆ ಕೋಣೆ ರೂಪುಗೊಂಡಿದೆ. ಸೌರಶಕ್ತಿ ಮತ್ತು ಸ್ವಚ್ಛ ಎಲ್ಪಿಜಿ ಯೊಂದಿಗೆ ಪರಿಸರಸ್ನೇಹಿ ಅಡುಗೆಮನೆ ಇದಾಗಿದೆ ಎಂದವರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಚೇತನ್ ಮತ್ತು ನವೀನ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News