×
Ad

ಬೆಂಜನಪದವು: ತಾಲೂಕು ಕ್ರೀಡಾಂಗಣಕ್ಕೆ ಮಂಜೂರಾದ 10 ಕೋಟಿ ರೂ. ಹಣ ಬಿಡುಗಡೆಗೆ ಶಾಸಕ ಮಂಜುನಾಥ ಭಂಡಾರಿ ಸೂಚನೆ

Update: 2025-07-02 14:20 IST

ಮಂಗಳೂರು: ಬಂಟ್ವಾಳ ತಾಲೂಕಿನ ಅಮ್ಮುಂಚೆ ಗ್ರಾಮದ ಬೆಂಜನಪದವು ಸರ್ಕಾರಿ ಪ್ರೌಢಶಾಲೆಯ ಹತ್ತಿರ ತಾಲೂಕು ಕ್ರೀಡಾಂಗಣ ನಿರ್ಮಿಸಲು ಸರ್ಕಾರದಿಂದ ರೂ. 10 ಕೋಟಿ ಅನುದಾನ ಮಂಜೂರಾಗಿದ್ದು, ಅದನ್ನು ಕೂಡಲೇ ಬಿಡುಗಡೆ ಮಾಡುವಂತೆ ಸೂಕ್ತ ನಿರ್ದೇಶನ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಸೂಚನೆ ನೀಡಿದ್ದಾರೆ.

ಬೆಂಜನಪದವು ಸರ್ಕಾರಿ ಪ್ರೌಢಶಾಲೆಯ ಹತ್ತಿರ ಸರ್ವೇ ಸಂಖ್ಯೆ 167/ಎ3, 167/1ಎಂ ಮತ್ತು 167/ 182 ರಲ್ಲಿ ಒಟ್ಟು 5.25 ಎಕರೆ ಸ್ಥಳದಲ್ಲಿ ಆಟದ ಮೈದಾನದ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರದ ಯವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಈ ಹಿಂದೆ ರಮಾನಾಥ್ ರೈ ಅವರು ಸಚಿವರಾಗಿದ್ದ ಅವಧಿಯಲ್ಲಿ 10 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಲಾಗಿತ್ತು. ಆದರೆ ಮಂಜೂರಾದ ಅನುದಾನ ಬಿಡುಗಡೆಯಾಗದ ಕಾರಣ ಕಾಮಗಾರಿ ಆರಂಭವಾಗಿರಲಿಲ್ಲ.

ಇದರಿಂದಾಗಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಆಟದ ಹಾಗೂ ಶಾರೀರಿಕ ತರಬೇತಿ ಚಟುವಟಿಕೆಗಳಿಗೆ ಇದರಿಂದ ತೀವ್ರ ಹಿನ್ನಡೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ, ತಾತ್ವಿಕ ಅನುಮೋದನೆ ನೀಡಿದ 10.00 ಕೋಟಿ ರೂಪಾಯಿ ಅನುದಾನವನ್ನು ಆರ್ಥಿಕ ಇಲಾಖೆಯಿಂದ ತ್ವರಿತವಾಗಿ ಬಿಡುಗಡೆ ಮಾಡಿದ್ದಲ್ಲಿ ಆಟದ ಮೈದಾನದ ಅಭಿವೃದ್ಧಿ ಕಾಮಗಾರಿಗಳನ್ನು ತಕ್ಷಣ ಆರಂಭಿಸಬಹುದಾಗಿದೆ.

ಆದ್ದರಿಂದ ಬೆಂಜನಪದವು ಪ್ರದೇಶದ ಕ್ರೀಡಾಪಟು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಂಬಂಧಿತ ಇಲಾಖೆ ಅಧಿಕಾರಿಗಳಿಗೆ ಅನುದಾದ ಬಿಡುಗಡೆ ಮಾಡುವಂತೆ ಸೂಕ್ತ ನಿರ್ದೇಶನ ನೀಡುವಂತೆ ಮಂಜುನಾಥ ಭಂಡಾರಿ ಸೂಚನೆ ನೀಡಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News