×
Ad

ಬೆಂಜನಪದವು : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

Update: 2024-08-08 14:31 IST

ಬಂಟ್ವಾಳ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ವೇಳೆ ನಡೆದಿದೆ.

ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15) ಆತ್ಮಹತ್ಯೆ ಮಾಡಿಕೊಂಡ ಬಾಲಕ.

ಬಡಕಬೈಲು ಸೈಂಟ್ ಡೊಮೊನಿಕ್ ಆಂಗ್ಲ ‌ಮಾಧ್ಯಮ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಕಲಿಯುತ್ತಿದ್ದ.  ಈತ ಕಲಿಕೆ ವಿಚಾರದಲ್ಲಿ ಆತ್ಮಹತ್ಯೆ ‌ಮಾಡಿಕೊಂಡಿರಬಹುದು ಎಂದು ಮನೆಯವರು ತಿಳಿಸಿದ್ದಾರೆ.

ಬುಧವಾರ ರಾತ್ರಿ ಸುಮಾರು 7.30 ಗಂಟೆಗೆ ಸ್ನಾನ ಮಾಡಲೆಂದು ಬಚ್ಚಲು ಕೋಣೆಗೆ ತೆರಳಿದ ಈತ 8 ಗಂಟೆಯಾದರೂ ವಾಪಸು ಬರದ್ದನ್ನು ಕಂಡ ತಾಯಿ ಬಾಗಿಲು ಬಡಿದರೂ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ಬಾಗಿಲು ಮುರಿದು ಒಳಗೆ ನುಗ್ಗಿದಾಗ ಈತ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಬಾಲಕನನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದು ಪರೀಕ್ಷೆ ನಡೆಸಿದಾಗ ಆತ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದರು.

ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News