×
Ad

ಡಾ. ಎ.ಟಿ. ರಾಮಚಂದ್ರ ನಾಯ್ಕರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Update: 2023-09-05 20:07 IST

ಮಂಗಳೂರು, ಸೆ.5: ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಅಂಗ ಸಂಸ್ಥೆಯಾದ ಮಂಗಳೂರಿನಲ್ಲಿರುವ ರಾಜ್ಯದ ಏಕೈಕ ಮೀನುಗಾರಿಕಾ ಕಾಲೇಜಿನ ಪ್ರೊ. ಆಗಿರುವ ಡಾ.ಎ.ಟಿ. ರಾಮಚಂದ್ರ ನಾಯ್ಕರವರಿಗೆ ವಿಶ್ವವಿದ್ಯಾಲಯದ ಶಿಕ್ಷಕರ ಸಂಘವು ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದೆ.

ಮಂಗಳವಾರ ವಿಶ್ವವಿದ್ಯಾಲಯದ ಮತ್ತೊಂದು ಸಂಂಸ್ಥೆಯಾಗಿರುವ ಗದಗ ಜಿಲ್ಲೆಯ ಪಶುವೈದ್ಯಕೀಯ ಕಾಲೇಜಿನಲ್ಲಿ ಮಂಗಳವಾರ ನಡೆದ ಶಿಕ್ಷಕರ ದಿನಾಚರಣೆಯ ವೇಳೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಡಾ. ಎ.ಟಿ. ರಾಮಚಂದ್ರ ನಾಯ್ಕರವರುಮೀನುಗಾರಿಕಾ ಕಾಲೇಜಿನ ಜಲ ಪರಿಸರ ನಿರ್ವಹಣೆ ವಿಭಾಗದಲ್ಲಿ ಪ್ರೊ. ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಇವರು ದಿಲ್ಲಿಯ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಪರಿಷತ್‌ನ ಪ್ರಾಯೋಜಿತ ಯೋಜನೆಯನ್ನು ಬೆಂಗಳೂರಿನ ಕೃಷಿವಿಶ್ವವಿದ್ಯಾನಿಲಯ ಹಾಗೂ ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ ಗಳಲ್ಲಿ ಅನುಷ್ಟಾನಗೊಳಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News