×
Ad

ದ.ಕ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಭುವನೇಶ್ವರಿ ಹೆಗಡೆ ಆಯ್ಕೆ

Update: 2024-02-28 15:38 IST

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಾರ್ಚ್ 23, 24 ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ 26ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ, ಕನ್ನಡದ ಪ್ರಮುಖ ಹಾಸ್ಯ ಲೇಖಕಿ ಭುವನೇಶ್ವರಿ ಹೆಗಡೆ ಅವರು ಆಯ್ಕೆಯಾಗಿದ್ದಾರೆ.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಭುವನೇಶ್ವರಿ ಹೆಗಡೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ದಕ್ಷಿಣ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ


 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News