ಬೈಕ್ ಢಿಕ್ಕಿ: ಗಾಯಾಳು ಪಾದಚಾರಿ ಮೃತ್ಯು
Update: 2025-08-21 22:16 IST
ಉಳ್ಳಾಲ: ಹೆದ್ದಾರಿ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು ಎಂಬಲ್ಲಿ ನಡೆದಿದೆ.
ಕುಂಪಲ ಚೇತನ ನಗರ ನಿವಾಸಿ ಲೋಕೇಶ್ (48)ಮೃತ ವ್ಯಕ್ತಿ.
ತೊಕ್ಕೊಟ್ಟಿನ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಲೋಕೇಶ್ ಅವರು ಆ.15 ರ ಸಂಜೆ ರಾತ್ರಿ ಪಾಳಿ ಕೆಲಸಕ್ಕೆ ತೆರಳುವಾಗ ಕಾಪಿಕಾಡು ಎಂಬಲ್ಲಿ ಹೆದ್ದಾರಿ ರಸ್ತೆ ದಾಟುತ್ತಿದ್ದ ವೇಳೆ ಮೋಟಾರ್ ಬೈಕ್ ಒಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದರು. ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನೆ ಕುರಿತಂತೆ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೃತ ಲೋಕೇಶ್ ಅವರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.