×
Ad

ಬೈಕ್ - ಸ್ಕೂಟಿ ಮಧ್ಯೆ ಅಪಘಾತ: ಮಹಿಳೆ ಮೃತ್ಯು

Update: 2024-09-02 20:42 IST

ಸುಳ್ಯ: ಬೈಕ್ ಮತ್ತು ಸ್ಕೂಟಿ ಮಧ್ಯೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ ಮಹಿಳೆ ಮೃತಪಟ್ಟ ಘಟನೆ ರವಿವಾರ ನಡೆದಿದೆ.

ಪೈಚಾರು ಸಮೀಪ ಬೈಕ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಬೈಕಿನಲ್ಲಿ ಸಹ ಸವಾರರಾಗಿದ್ದ ಉತ್ತರ ಕರ್ನಾಟಕ ಮೂಲದ ಯಲಬುರ್ಗಿ ತಾಲೂಕಿನ ಚಿಕ್ಕ ಬನ್ನಿಗೋಳ ಗ್ರಾಮದ ಫಿರಾಬಿ (40) ಎಂಬವರು ರಸ್ತೆಗೆ ಬಿದ್ದಿದ್ದು ಕೂಡಲೇ ಸ್ಥಳೀಯರು ಸೇರಿ ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ಮೃತಪಟ್ಟಿದ್ದಾರೆ.

ಮೃತ ಮಹಿಳೆ ಸುಳ್ಯದಲ್ಲಿ ಕಳೆದ ಹಲವಾರು ವರ್ಷಗಳಿಂದ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು. ಸೆ.1ರಂದು ಮಧ್ಯಾಹ್ನ ಕೆಲಸದ ನಿಮಿತ್ತ ಎಲ್ಲಪ್ಪ ಎಂಬವರ ಜೊತೆ ಪೈಚಾರು ಕಡೆ ಹೋಗುತ್ತಿದ್ದ ಸಂದರ್ಭ ರಸ್ತೆಯ ಬದಿಯಲ್ಲಿದ್ದ ಪೈಚಾರಿನ ಸ್ಕೂಟಿ ವಾಹನ ಸವಾರ ಸುಳ್ಯದತ್ತ ಬರಲು ವಾಹನ ತಿರುಗಿಸಿದಾಗ ಈ ಅಪಘಾತ ಸಂಭವಿಸಿದೆ. ಸುಳ್ಯ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News