ಚುನಾವಣಾ ಆಯೋಗದಲ್ಲಿ ಬಿಜೆಪಿಗರು: ಕಾಂಗ್ರೆಸ್ ಆರೋಪ
Update: 2025-08-06 17:43 IST
ಮಂಗಳೂರು: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಚುನಾವಣಾ ಆಯೋಗವು ತನ್ನ ಅಸ್ತಿತ್ವವನ್ನು ಕಳಕೊಂಡಿದೆ. ಚುನಾವಣಾ ಆಯೋಗವು ದ ಸ್ವಾಭಿಮಾನದ ಅಸ್ತಿತ್ವವನ್ನು ಕಳೆದುಕೊಂಡಿದೆ. ಚುನಾವಣಾ ಆಯೋಗವು ತನ್ನತನವನ್ನು ಕೇಂದ್ರದ ಬಿಜೆಪಿ ಸರಕಾರಕ್ಕೆ ಅಡವಿಟ್ಟಿದೆ ಎಂಬುದು ಅದರ ಕಾರ್ಯ ವೈಖರಿಯಿಂದ ವ್ಯಕ್ತವಾಗುತ್ತಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ದಿನೇಶ್ ಮೂಳೂರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರತೀ ವಿಧಾನಸಭೆ, ಲೋಕಸಭಾ ಚುನಾವಣೆಯ ಸಂದರ್ಭ ಚುನಾವಣಾ ಆಯೋಗವು ಕೇಂದ್ರ ಸರಕಾರದ ಅನತಿಯಂತೆ ಕಾರ್ಯನಿರ್ವಹಿಸುತ್ತಿದೆ. ಹಾಗಾಗಿ ಚುನಾವಣಾ ಆಯೋಗದಲ್ಲಿ ಬಿಜೆಪಿಗರು ಇದ್ದಾರೆಯೇ ಎಂಬ ಪ್ರಶ್ನೆ ವ್ಯಕ್ತವಾಗಿದೆ. ಚುನಾವಣಾ ಅಕ್ರಮ ಶಂಕೆಯ ಹಿನ್ನಲೆಯಲ್ಲಿ ಯಂತ್ರದ ಬದಲು ಬ್ಯಾಲೆಟ್ ಪೇಪರ್ ಮೂಲಕ ಮತದಾನ ಮಾಡುವಂತೆ ಕಾಂಗ್ರೆಸ್ ಮನವಿ ಮಾಡಿದರೂ ಕೇಂದ್ರ ಸರಕಾರ ಅದನ್ನು ಪರಿಗಣಿಸಿಲ್ಲ ಎಂದು ಆರೋಪಿಸಿದ್ದಾರೆ.