×
Ad

ಬೋಳಿಯಾರ್ ಚೂರಿ ಇರಿತ ಪ್ರಕರಣ: ಮೂವರು ಪೊಲೀಸ್ ವಶಕ್ಕೆ

Update: 2024-06-10 12:11 IST

ಕೊಣಾಜೆ, ಜೂ.10: ಮುಡಿಪು ಸಮೀಪದ ಬೋಳಿಯಾರು ಬಳಿ ರವಿವಾರ ರಾತ್ರಿ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕೊಣಾಜೆ ಠಾಣಾ ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ಘಟನೆಗೆ ಸಂಬಂಧಿಸಿದಂತೆ ಸಿಸಿ ಟಿವಿ ಫೂಟೇಜ್ ನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ವಿವರ: ಕೇಂದ್ರದಲ್ಲಿ ಎನ್.ಡಿ.ಎ. ಸರಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ರವಿವಾರ ರಾತ್ರಿ ಬೋಳಿಯಾರ್ ನಲ್ಲಿ ವಿಜಯೋತ್ಸವ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಮೆರವಣಿಗೆಯ ಬಳಿಕ ಬೋಳಿಯಾರ್ ಬಾರ್ ಮುಂಭಾಗದಲ್ಲಿ ತಂಡವೊಂದು ಮೂವರು ಬಿಜೆಪಿ ಕಾರ್ಯಕರ್ತರನ್ನು ಅಡ್ಡಗಟ್ಟಿ ಚೂರಿಯಿಂದ ಇರಿದು ಪರಾರಿಯಾಗಿದೆ ಎನ್ನಲಾಗಿದೆ. ಹಲ್ಲೆಗೊಳಗಾದ ಹರೀಶ್ ನಂದಕುಮಾರ್ ಹಾಗೂ ಕೃಷ್ಣ ಕುಮಾರ್ ಎಂಬವರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕೊಣಾಜೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News