×
Ad

ಬಂದರು: ಬೆಂಕಿ ಆಕಸ್ಮಿಕ; ಗೃಹೋಪಕರಣಗಳಿಗೆ ಹಾನಿ

Update: 2024-04-06 15:10 IST

ಮಂಗಳೂರು: ನಗರದ ಬಂದರಿನ ಜಿ ಎಂ ರಸ್ತೆಯ ಮನೆಯಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ಮನೆಯಲ್ಲಿದ್ದ ಸೊತ್ತುಗಳು ಬೆಂಕಿಗಾಹುತಿಯಾಗಿವೆ. ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಅಗ್ನಿಯ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಪೂರ್ವಾಹ್ನ.11 :15ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು,  ಮನೆಯವರು ಹೊರಗೆ ಬಂದು ಸುರಕ್ಷಿತ ರಾಗಿದ್ದಾರೆ ಎಂದು ತಿಳಿದು ಬಂದಿದೆ. ಪಾಂಡೇಶ್ವರ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದೆ  ಉಂಟಾಗಿರುವ ಸಾಧ್ಯತೆ ಇದೆ ಎಂದು ಅಗ್ನಿ ಶಾಮಕ ದಳದವರು ಅಭಿಪ್ರಾಯಪಟ್ಟಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News